Log In
BREAKING NEWS >
ಮುಖ್ಯಮ೦ತ್ರಿಗಳಿ೦ದ "ವಿಶ್ವಪಥ" ನೂತನ ದರ್ಶನ ದಾರಿಯ ಉದ್ಘಾಟನೆ......ಪರ್ಯಾಯ ಪ೦ಚಶತಮಾನೋತ್ಸವ-ಪರ್ಯಾಯದ ಮೆರವಣಿಗೆಯನ್ನು ನೆನಪಿಸುವ ಮೆರವಣಿಗೆಗೆ ರಾಜ್ಯ ವಿಧಾನ ಸಭಾ ಸ್ವೀಕರ್ ರವರಿ೦ದ ಬಣ್ಣದ ಕೊಡೆ ಅರಳಿಸಿ ಚಾಲನೆ....

ಶ್ರೀನಗರದಲ್ಲಿ ಎನ್’ಕೌಂಟರ್: ಸೇನಾಪಡೆ ಗುಂಡಿಗೆ ಎಲ್ಇಟಿ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ.

ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ 2-3 ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಸಿಆರ್’ಪಿಎಫ್ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಇದೀಗ ಎಲ್ಇಟಿ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಉಗ್ರರು ಅಡಗಿ ಕುಳಿತಿದ್ದ ಪ್ರದೇಶವನ್ನು ಭದ್ರತಾಪಡೆಗಳು ಸುತ್ತುವರೆದಿದ್ದರು. ಈ ವೇಳೆ ತಪ್ಪಿಸಿಕೊಳ್ಳಲು ಯಾವುದೇ ಮಾರ್ಗಗಳು ಸಿಗದ ಹಿನ್ನೆಲೆಯಲ್ಲಿ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು.

ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾಪಡೆ ಇದೀಗ ಎಲ್ಇಟಿ ಟಾಪ್ ಕಮಾಂಡರ್ ಸೈಫುಲ್ಲಾ ಹಾಗೂ ಆತನ ಸಹಚರನನ್ನು ಹತ್ಯೆ ಮಾಡಿದ ಎಂದು ತಿಳಿದುಬಂದಿದೆ.

ಹತ್ಯೆಯಾದ ಸೈಫುಲ್ಲಾ ಸೆಪ್ಟೆಂಬರ್ 24ರಂದು ಸಿಆರ್’ಪಿಎಫ್ ಪಡೆಗಳ ಮೇಲೆ ನಡೆದಿದ್ದ ದಾಳಿ ಪ್ರಕರಣದಲ್ಲಿ ಭಾಗಿಯಾಗಿದ್ದನೆಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಅವರು ಹೇಳಿದ್ದಾರೆ.

ಸೆ.24ರಂದು ನಡೆದಿದ್ದ ದಾಳಿಯಲ್ಲಿ ಎಎಸ್ಐ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದರು. ಇದಲ್ಲದೆ, ಕಳೆದ ವಾರ ಪ್ಯಾಂಪೋರ್ ನಲ್ಲಿ ನಡೆದಿದ್ದ ದಾಳಿಯಲ್ಲಿಯೂ ಭಾಗಿಯಾಗಿದ್ದ. ಈ ದಾಳಿಯಲ್ಲಿ ಇಬ್ಬರು ಸಿಆರ್’ಪಿಎಫ್ ಯೋಧರು ಹುತಾತ್ಮರಾಗಿ ಮೂವರು ಗಾಯಗೊಂಡಿದ್ದರು.

ಕಳೆದ ವರ್ಷವ ಸೈಫುಲ್ಲಾ ಅಕ್ರಮವಾಗಿ ಭಾರತದ ಗಡಿ ಪ್ರವೇಶಿಸಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ ಈತನಿಗಾಗಿ ತೀವ್ರ ಹುಡುಕಾಟ ನಡೆದಿದ್ದವು. ಬಳಿಕ ಸೈಫುಲ್ಲಾ ತನ್ನ ಚಟುವಟಿಕೆಗಳನ್ನು ಉತ್ತರ ಕಾಶ್ಮೀರದಲ್ಲಿ ನಡೆಸಲು ಆರಂಭಿಸಿದ್ದ.

ಕಾರ್ಯಾಚರಣೆಯಲ್ಲಿ ಈತನ ಸಹಚರನನ್ನೂ ಕೂಡ ಹತ್ಯೆ ಮಾಡಲಾಗಿದ್ದು, ಈತನ ಗುರುತು ಪತ್ತೆಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

No Comments

Leave A Comment