Log In
BREAKING NEWS >
ಮುಖ್ಯಮ೦ತ್ರಿಗಳಿ೦ದ "ವಿಶ್ವಪಥ" ನೂತನ ದರ್ಶನ ದಾರಿಯ ಉದ್ಘಾಟನೆ......ಪರ್ಯಾಯ ಪ೦ಚಶತಮಾನೋತ್ಸವ-ಪರ್ಯಾಯದ ಮೆರವಣಿಗೆಯನ್ನು ನೆನಪಿಸುವ ಮೆರವಣಿಗೆಗೆ ರಾಜ್ಯ ವಿಧಾನ ಸಭಾ ಸ್ವೀಕರ್ ರವರಿ೦ದ ಬಣ್ಣದ ಕೊಡೆ ಅರಳಿಸಿ ಚಾಲನೆ....

ಬಿಹಾರ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಮಗುವಿನ ಸಮೇತ ಕಾಲುವೆಗೆ ಎಸೆದ ಕಿರಾತಕರು

ಬಿಹಾರ: ಬಿಹಾರ ರಾಜ್ಯದ ಬಕ್ಸರ್ ಜಿಲ್ಲೆಯಲ್ಲಿ ಮತ್ತೋರ್ವ ದಲಿತ ಮಹಿಳೆಯೊಬ್ಬರ ಮೇಲೆ ಕೆಲವು ಕಿರಾತಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆಕೆಯ ಮಗುವಿನ ಸಮೇತ ಅವರನ್ನು ಕಾಲುವೆಗೆ ಎಸೆದಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಐದು ವರ್ಷದ ಮಗುವನ್ನು ಕಾಲುವೆಗೆ ಎಸೆದಿದ್ದರಿಂದ ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದ ಏಳು ಆರೋಪಿಗಳಲ್ಲಿ ಒಬ್ಬನನ್ನು ಈಗಾಗಲೇ ಬಂಧಿಸಲಾಗಿದೆ. ಇಬ್ಬರನ್ನು ಗುರುತಿಸಲಾಗಿದೆ. ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಪಾಟ್ನಾದಿಂದ 135 ಕಿ.ಮೀ ದೂರದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ. ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ಕೆ.ಕೆ.ಸಿಂಗ್ ಹೇಳಿದ್ದಾರೆ

No Comments

Leave A Comment