Log In
BREAKING NEWS >
ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿ ರಾಜ್ಯದಲ್ಲಿ ಹಲವೆಡೆ ಇನ್ನೆರಡು ದಿನ ಮಳೆ

ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾl ಕೆ.ವಿ. ರಾಜೇಂದ್ರ ಅವರಿಗೂ ಕೋವಿಡ್ ಪಾಸಿಟಿವ್

ಮಂಗಳೂರು : ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು ಮನೆಯಲ್ಲೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಜೊತೆಗೆ ಪತ್ನಿ ಹಾಗೂ ಮಗುವಿಗೂ ಪರೀಕ್ಷೆ ನಡೆಸಿದ ಸಂದರ್ಭ ಅವರ ವರದಿಯಲ್ಲೂ ಸೋಂಕು ದೃಢಪಟ್ಟಿದೆ ಹಾಗಾಗಿ ಅವರನ್ನೂ ಹೋಂ ಕ್ವಾರಂಟೈನ್ ಮಾಡಲಾಗಿದೆ.

ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಕೂಡಾ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನೇ ದಿನೆ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿದೆ, ಜಿಲ್ಲೆಯಲ್ಲಿ ಸೋಮವಾರ 303 ಪಾಸಿಟಿವ್ ಪ್ರಕಾರರಣಗಳು ದಾಖಲಾಗಿದ್ದು ಸಾರ್ವಜನಿಕರು ಜಾಗರೂಕತೆ ವಹಿಸಬೇಕಾಗಿದೆ.

No Comments

Leave A Comment