ರಾಜ್ಯದಲ್ಲಿ ಮುಂದುವರೆದ ಮಳೆ ಆರ್ಭಟ, ತಪ್ಪದ ರೈತರ ಗೋಳಾಟ! ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮಂಗಳವಾರವೂ ಮಂದುವರೆದಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಉಡುಪಿ, ಕಾರ್ಕಳ, ಕಾಪು, ಮಂಗಳೂರು ಭಾಗದಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಉತ್ತಮ ಮಳೆಯಾಗುತ್ತಿದೆ. ಹಲವೆಡೆ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ರೈತರು ಸಂಕಷ್ಟ, ಪರದಾಟ ಅನುಭವಿಸುವಂತಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. Share this:TweetWhatsAppEmailPrintTelegram