Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸ೦ಭ್ರಮದ ಲಕ್ಷದೀಪೋತ್ಸವ... ........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿವೇಕ್ ಒಬೆರಾಯ್ ಮನೆಗೆ ಸಿಸಿಬಿ ದಾಳಿ

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಇಂದು ಬಾಲಿವುಡ್ ನಟ ವಿವೇಕ್ ಒಬೆರಾಯ್ ರ ಮುಂಬೈ ನಿವಾಸಕ್ಕೆ ದಾಳಿ ನಡೆಸಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ ಆದಿತ್ಯ ಆಳ್ವ ತಲೆಮರೆಸಿಕೊಂಡಿದ್ದಾನೆ. ಬಾಲಿವುಡ್ ನ ವಿವೇಕ್ ಒಬೆರಾಯ್ ಮೈದುನನಾಗಿರುವ ಆದಿತ್ಯ ಆಳ್ವ ಸದ್ಯ ವಿವೇಕ್ ಒಬೆಯಾರ್ ಮನೆಯಲ್ಲಿ ಅಡಗಿರುವ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಇಂದು ದಾಳಿ ನಡೆಸಿದ್ದಾರೆ.

ಡ್ರಗ್ ಪ್ರಕರಣದಲ್ಲಿ ಆದಿತ್ಯ ಆಳ್ವ ಎ6 ಆರೋಪಿಯಾಗಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆದಿತ್ಯ ಆಳ್ವ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಹುಡುಕಾಟದಲ್ಲಿದ್ದಾರೆ. ಕೆಲವು ವಾರಗಳ ಹಿಂದೆ ಆದಿತ್ಯ ಆಳ್ವ ಬೆಂಗಳೂರು ನಿವಾಸಕ್ಕೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.

ಆದಿತ್ಯ ಆಳ್ವ ಮಾಜಿ ಸಚಿವ ಜೀವರಾಜ್ ಆಳ್ವ ಮತ್ತು ನಂದಿನಿ ಆಳ್ವ ಪುತ್ರ. ಡ್ರಗ್ ಪ್ರಕರಣದ ಪ್ರಮುಖ ಆರೋಪಿಗಳಾದ ಶಿವಪ್ರಕಾಶ್ ಚೆಪ್ಪಿ ಮತ್ತು ಶೇಕ್ ಫಾಜಿಲ್ ಕೂಡಾ ತಲೆಮರೆಸಿಕೊಂಡಿದ್ದಾರೆ. ಪ್ರಕರಣದಲ್ಲಿ ನಟಿಯರಾದ ರಾಗಿಣಿ ಮತ್ತು ಸಂಜನಾ ಗಲ್ರಾಣಿ ಬಂಧನಕ್ಕೊಳಗಾಗಿದ್ದಾರೆ.

No Comments

Leave A Comment