Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅಕ್ಟೋಬರ್ 26ರ೦ದು ಚ೦ಡಿಕಾ ಹೋಮ ನಡೆಯಲಿದೆ. ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಮೀನು ವಾಹನದಲ್ಲಿ ಅಕ್ರಮ ಗೋ ಮಾಂಸ ಸಾಗಾಟ: 10 ಟನ್ ಮಾಂಸ ವಶ

ಮಂಗಳೂರು: ಮೀನು ಸಾಗಾಟ ಮಾಡುವ ವಾಹನದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಗುಂಪನ್ನು ಇಂದು ಬೆಳಿಗ್ಗೆ ಮಂಗಳೂರಿನ ಪಂಪ್ ವೆಲ್ ಬಳಿ ವಶಕ್ಕೆ ಪಡೆಯಲಾಗಿದೆ.

ಟ್ರಕ್ ನಲ್ಲಿ ಗೋ ಮಾಂಸವನ್ನು ಸಾಗಾಟ ಮಾಡಲಾಗುತ್ತಿತ್ತು. ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಟ್ರಕ್ ನ್ನು ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ. ಸುಮಾರು 10 ಟನ್ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಕಂಕನಾಡಿ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕೆಲ ದಿನಗಳ ಹಿಂದೆ ಹಾಲಿನ ವಾಹನದಲ್ಲಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಗುಂಪನ್ನು ಮಂಗಳೂರಿನಲ್ಲಿ ತಡೆದು ವಶಕ್ಕೆ ಪಡೆಯಲಾಗಿತ್ತು.

No Comments

Leave A Comment