ಹಾಡುಹಗಲೇ ರೌಡಿಶೀಟರ್ ತುಳು ಚಲನ ಚಿತ್ರ ನಟ ಸುರೇಂದ್ರ ಬಂಟ್ವಾಳ್ನ ಬರ್ಬರ ಹತ್ಯೆ ಬಂಟ್ವಾಳ: ಬುಧವಾರ ಹಾಡುಹಗಲೇ ರೌಡಿಶೀಟರ್ ಸುರೇಂದ್ರ ಬಂಟ್ವಾಳ್ನ ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ. ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ವಸ್ತಿ ಕಟ್ಟದಲ್ಲಿ ಹಾಡುಹಾಗಲೇ ರೌಡಿಶೀಟರ್ ಸುರೇಂದ್ರ ಬಂಟ್ವಾಳ್ನ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ. ಪ್ರಸ್ತುತ ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. 2018 ರಲ್ಲಿ ಬಡ್ಡಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕತ್ತಿಯಿಂದ ಹಲ್ಲೆ ಮಾಡಿದ ಆರೋಪದ ಮೇಲೆ ಸುರೇಂದ್ರ ಸುದ್ದಿಯಲ್ಲಿದ್ದರು. ಈ ಹಿಂದೆ ಬಲಪಂಥೀಯ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಸುರೇಂದ್ರ ಬಂಟ್ವಾಲ್ ರೌಡಿಶೀಟರ್ ಆಗಿದ್ದು ಬಳಿಕ ಕಾಂಗ್ರೆಸ್ ಸೇರಿದ್ದರು. ಅವರು ಚಾಲಿಪೋಲಿಲು ತುಳು ಸಿನಿಮಾದಲ್ಲಿ ನಟಿಸಿದ್ದರು. Share this:TweetWhatsAppEmailPrintTelegram