Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

ಜೆಡಿಎಸ್ ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಕುಂದಗೋಳದ ಜೆಡಿಎಸ್ ನ ಮಾಜಿ ಶಾಸಕ ಎಂ.ಎಸ್.ಅಕ್ಕಿ(ಮಲ್ಲಿಕಾರ್ಜುನ ಅಕ್ಕಿ) ಸೇರಿದಂತೆ ಕೆಲವು ಜೆಡಿಎಸ್ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರು ಅಕ್ಕಿಯವರನ್ನು ಪಕ್ಷದ ಶಾಲು ಹೊದಿಸಿ ಧ್ವಜ ನೀಡಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಸಂಭಾವಿತ ವ್ಯಕ್ತಿ ಅಕ್ಕಿ ಶಾಸಕರಾಗಿ ನಮ್ಮ ಜೊತೆ ಕೆಲಸ ಮಾಡಿದ್ದರು. ನಮಗೆ ಸಾಕಷ್ಟು ಸಹಕಾರ ಮಾಡಿದ್ದರು. ಈಗ ಬೇಷರತ್ತಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ದಿವಂಗತ ಶಿವಳ್ಳಿ, ಅಕ್ಕಿ ಇಬ್ಬರೂ ಒಂದೇ ಊರಿನವರು. ಅಕ್ಕಿ ಜೊತೆ ತಾಲೂಕು ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಸಹ ಪಕ್ಷ ಸೇರಿದ್ದಾರೆ. ಇವರ ಸೇರ್ಪಡೆಯಿಂದ ಆ ಭಾಗದಲ್ಲಿ ಪಕ್ಷಕ್ಕೆ ಮತ್ತಷ್ಟು‌ ಬಲ ತರಲಿದೆ ಎಂದರು.

ಕಾಂಗ್ರೆಸ್ ಸೇರ್ಪಡೆ ಬಳಿಕ ಮಲ್ಲಿಕಾರ್ಜುನ ಅಕ್ಕಿ ಮಾತನಾಡಿ, ತಾವು 1987 ರಲ್ಲಿ ರಾಜಕೀಯಕ್ಕೆ ಬಂದಿದ್ದು, ಜೆಡಿಎಸ್ ಪಕ್ಷದಿಂದ ಶಾಸಕನಾಗಿದ್ದೆ. ಪ್ರಸಕ್ತ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷ ಸೇರಿದ್ದೇನೆ ಎಂದರು.

ಬಿಜೆಪಿಯನ್ನು ಎದುರಿಸುವ ಶಕ್ತಿ ಡಿಕೆಶಿಯವರಿಗಿದೆ. ಹಾಗಾಗಿಯೇ ಇಂದು ಕಾಂಗ್ರೆಸ್ ಸೇರಿದ್ದೇನೆ. ಸಿದ್ದರಾಮಯ್ಯನವರ ಜೊತೆಯೂ ಈ ಸಂಬಂಧ ಮಾತನಾಡಿದಾಗ ಖುಷಿಯಿಂದ ತಮ್ಮನ್ನು ಹುರಿದುಂಬಿಸಿದ್ದಾರೆ ಎಂದರು.

No Comments

Leave A Comment