Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪರಾಮರ್ಶೆ ನಡೆಸಲು ಪಾಕಿಸ್ತಾನ ಸಂಸತ್ ಒಪ್ಪಿಗೆ

ಇಸ್ಲಾಮಾಬಾದ್: ಗೂಢಚಾರಿಕೆ ಮತ್ತು ಭಯೋತ್ಪಾದನೆ ಆರೋಪದಲ್ಲಿ ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆಯನ್ನು ಪರಾಮರ್ಶೆ ನಡೆಸಲು ಪಾಕಿಸ್ತಾನ ಸಂಸತ್ ಒಪ್ಪಿಗೆ ನೀಡಿದೆ.

ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಪಾಕಿಸ್ತಾನ ರಾಷ್ಟ್ರೀಯ ಸಂಸತ್’ನ ಕಾನೂನು ಮತ್ತು ನ್ಯಾಯ ಸ್ಥಾಯಿ ಸಮಿತಿಯು ಜಾಧವ್ ಅವರ ಗಲ್ಲು ಶಿಕ್ಷೆಯನ್ನು ಪರಾಮರ್ಶೆ ನಡೆಸುವ ಮಸೂದೆಗೆ ಒಪ್ಪಿಗೆ ನೀಡಿದೆ.

ಸಮಿತಿಯಲ್ಲಿದ್ದ ಪಾಕಿಸ್ತಾನ ಮುಸ್ಲಿಂ ಲೀಗ್, ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮತ್ತು ಜಮೈತ್ ಉಲೆಮಾ ಇ ಇಸ್ಲಾಂ ಪಕ್ಷಗಳ ಸದಸ್ಯರು ಮಸೂದೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಜಾಧವ್ ಅವರಿಗೆ ಅನುಕೂಲ ಮಾಡಿಕೊಡುವ ಎನ್ಆರ್ಒ ಎಂದು ಆರೋಪಿಸಿದ್ದವು.

ಈ ಹಿಂದೆ ರಾಷ್ಟ್ರೀಯ ಸಮನ್ವಯ ಸುಗ್ರೀವಾಜ್ಞೆಯನ್ನು ಆಗಿನ ಸೇನಾ ಸರ್ವಾಧಿಕಾರಿ ಪರ್ವೇಜ್ ಮುಷರಪ್ ಅವರು ಜಾರಿಗೆ ತಂದಿದ್ದರು. ಗಡಿಪಾರಾದ ರಾಜಕೀಯ ನಾಯಕರು ಮತ್ತು ರಾಜಕಾರಣಿಗಳ ವಿರುದ್ಧದ ಗಂಭೀರ ಪ್ರಕರಣಗಳನ್ನು ಕೈಬಿಡುವ ಆದೇಶವನ್ನು ನೀಡಿದ್ದರು.

ಈ ಮಸೂದೆಯನ್ನು ಅಂತರಾಷ್ಟ್ರೀಯ ನ್ಯಾಯಾಲಯದ ನಿರ್ದೇಶನಗಳಿಗೆ ಅನುಸಾರ ಜಾರಿಗೆ ತರಲಾಗಿದೆ ಎಂದು ಕಾನೂನು ಮತ್ತು ನ್ಯಾಯಾಂಗ ಸಚಿವ ಫಾರೋಗ್ ನಸೀಮ್ ಅಂತರಾಷ್ಟ್ರೀಯ ನ್ಯಾಯಾಲಯ ಸುಗ್ರೀವಾಜ್ಞೆ ಮಸೂದೆಯನ್ನು ಸಮರ್ಥಿಸಿಕೊಂಡಿದ್ದರು.

ಒಂದು ವೇಳೆ ಈ ಮಸೂದೆಯನ್ನು ಸಂಸತ್ ಅಂಗೀಕರಿಸಿದೇ ಹೋದರೆ, ಪಾಕಿಸ್ತಾನವು ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ ತಪ್ಪಿಗಾಗಿ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಭಾರತೀಯ ಗೂಢಚಾರಿಗೆ ಅನುಕೂಲ ಮಾಡಿಕೊಡುವ ಕಾನೂನು ರೂಪಿಸಲು ನಾವು ಇಲ್ಲಿ ಕುಳಿತಿಲ್ಲ. ಸಾರ್ವಜನಿಕ ಚರ್ಚೆಗಾಗಿ ಈ ಮಸೂದೆಯನ್ನು ಸಾರ್ವಜನಿಕ ಮತ್ತು ಬಾರ್ ಅಸೋಸಿಯೇಷನ್ ಮುಂದೆ ಪ್ರಸ್ತುತಪಡಿಸಬೇಕಿದೆ. ನೀವು ದೇಶವನ್ನು ತಪ್ಪು ಹಾದಿಗೆಳೆಯುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

No Comments

Leave A Comment