Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

India cricket legend Kapil Dev suffers heart attack/ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್‍ ಆಸ್ಪತ್ರೆಗೆ ದಾಖಲು

Former India captain Kapil Dev has been taken to hospital after suffering a heart attack according to reports in India.

The 61-year-old World Cup-winning skipper — regarded as one of the greatest all-round cricketers of all time — has reportedly undergone angioplasty.

ನವದೆಹಲಿ: ಟೀ ಇಂಡಿಯಾ ಚೊಚ್ಚಲ ವಿಶ್ವಕಪ್ ವಿಜೇತ ತಂಡದ ನಾಯಕರಾಗಿದ್ದ, ದಿಗ್ಗಜ ಆಟಗಾರ ಕಪಿಲ್ ದೇವ್ ಅವರಿಗೆ ಹೃದಯಘಾತವಾಗಿತ್ತು. ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

61 ವರ್ಷದ ಕಪಿಲ್ ದೇವ್ ಅವರಿಗೆ ಸದ್ಯ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದೆ, ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿರುವ ವಿಚಾರವನ್ನು ಖ್ಯಾತ ಪತ್ರಕರ್ತೆ ಟೀನಾ ಠಾಕೂರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

2020ರ ಐಪಿಎಲ್ ಟೂರ್ನಿಯ ಕುರಿತು ತಮ್ಮ ಅಭಿಪ್ರಾಯಗಳನ್ನು ಕಪಿಲ್ ದೇವ್ ಹಂಚಿಕೊಳ್ಳುತ್ತಿದ್ದರು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಪಿಲ್ ದೇವ್ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಲವು ಗಣ್ಯರು, ಅಭಿಮಾನಿಗಳು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.

ಟೀಂ ಇಂಡಿಯಾ ಪರ 131 ಟೆಸ್ಟ್ ಪಂದ್ಯಗಳನ್ನು ಆಡಿರುವ ಕಪಿಲ್ ದೇವ್ ಅವರು, 5,248 ರನ್ ಗಳಿಸಿದ್ದು, 8 ಶತಕಗಳನ್ನು ಸಿಡಿಸಿದ್ದಾರೆ. 225 ಏಕದಿನ ಪಂದ್ಯಗಳಲ್ಲಿ 3,783 ರನ್ ಗಳಿಸಿದ್ದಾರೆ. ಅಲ್ಲದೇ ಟೆಸ್ಟ್ ನಲ್ಲಿ 434 ವಿಕೆಟ್, ಏಕದಿನ ಮಾದರಿ ಕ್ರಿಕೆಟ್‍ನಲ್ಲಿ 253 ವಿಕೆಟ್ ಪಡೆದುಕೊಂಡಿದ್ದಾರೆ. 1959 ಜನವರಿ 6 ರಂದು ಚತ್ತೀಸ್‍ಗಢದಲ್ಲಿ ಜನಿಸಿದ್ದ ಅವರು, 1978 ರ ಅಕ್ಟೋವರ್ ನಲ್ಲಿ ಪಾಕಿಸ್ತಾನ ವಿರುದ್ಧ ಟೆಸ್ಟ್ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ದರು.

No Comments

Leave A Comment