Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸ೦ಭ್ರಮದ ಲಕ್ಷದೀಪೋತ್ಸವ... ........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಕಣ್ಣಿಗೆ ಖಾರದ ಪುಡಿ ಎರಚಿ ರೌಡಿ ಶೀಟರ್ ಬರ್ಬರ ಕೊಲೆ- ಬೆಚ್ಚಿಬಿದ್ದ ಮಂಡ್ಯ ಜನತೆ

ಮಂಡ್ಯ: ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದ್ದು, ಕಣ್ಣಿಗೆ ಖಾರದ ಪುಡಿ ಎರಚಿ ರೌಡಿ ಶೀಟರ್‍ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ಘಟನೆ ನಡೆದಿದೆ. ಕಣ್ಣಿಗೆ ಖಾರದ ಪುಡಿ ಎರಚಿ ರೌಡಿ ಶೀಟರ್ ಪಾಲಹಳ್ಳಿ ಹರೀಶ್ ಕಳ್ಳಪಚ್ಚಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಕಣ್ಣಿಗೆ ಖಾರದ ಪುಡಿ ಎರಚಿ ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಇದನ್ನು ಕಂಡ ಮಂಡ್ಯದ ಜನತೆ ಬೆಚ್ಚಿ ಬಿದ್ದಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಹರೀಶ್ ಮೃತದೇಹವನ್ನು ಪೊಲೀಸರು ಪರಿಶೀಲಿಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

No Comments

Leave A Comment