Log In
BREAKING NEWS >
ಮಾ.5ರ೦ದು ಬೆಳಿಗ್ಗೆ 8ಗ೦ಟೆಗೆ ಪಣಿಯಾಡಿ ಶ್ರೀಅನ೦ತಪದ್ಮನಾಭ ದೇವಳದ ಗರ್ಭಗುಡಿಯ ಮಹಾದ್ವಾರದ ಹೊಸ್ತಿಲು ಸ್ಥಾಪನೆ ಕಾರ್ಯಕ್ರಮ ಜರಗಲಿದೆ....

ಕಾಬುಲ್ ಶಿಕ್ಷಣ ಸಂಸ್ಥೆಯ ಬಳಿ ಆತ್ಮಾಹುತಿ ದಾಳಿ: ಮಕ್ಕಳು ಸೇರಿ 30 ಮಂದಿ ಸಾವು, 70ಕ್ಕೂ ಹೆಚ್ಚು ಜನರಿಗೆ ಗಾಯ

ಕಾಬುಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನಲ್ಲಿರುವ ಶಿಕ್ಷಣ ಕೇಂದ್ರವೊಂದರ ಬಳಿ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ ಮಕ್ಕಳು ಸೇರಿದಂತೆ 30 ಮಂದಿ ಸಾವನ್ನಪ್ಪಿದ್ದು, ದುರಂತದಲ್ಲಿ 70ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಅಫಘಾನ್ ಆರೋಗ್ಯ ಸಚಿವಾಲಯದ ಮೂಲಗಳ ಪ್ರಕಾರ ಸ್ಫೋಟದಿಂದ ಸಾವನ್ನಪ್ಪಿದವರ ಸಂಖ್ಯೆ 30ಕ್ಕೆ ಏರಿಕೆ ಆಗಿದ್ದು, ಇನ್ನೂ 70 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ಫೋಟ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಭದ್ರತಾ ಪಡೆಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ಕಾಬೂಲ್‌ನ ಜಿನ್ನಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಶನಿವಾರ, ಆತ್ಮಾಹುತಿ ದಾಳಿಕೋರರು ಕಾಬೂಲ್‌ನ ಪಶ್ಚಿಮ ದಶ್-ಎ-ಬಾರ್ಚಿ ನೆರೆಹೊರೆಯ ಪುಲ್-ಎ-ಖೋಷ್ಕ್ ಪ್ರದೇಶದ ಶಿಕ್ಷಣ ಕೇಂದ್ರದ ಬಳಿ ಬಾಂಬ್ ಸ್ಫೋಟಿಸಿದ್ದಾರೆ.

No Comments

Leave A Comment