ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಅಲಹಾಬಾದ್ ಹೈಕೋರ್ಟ್ ಗೆ: ಸುಪ್ರೀಂ ಕೋರ್ಟ್
ನವದೆಹಲಿ: ಹತ್ರಾಸ್ ಕೇಸಿಗೆ ಸಂಬಂಧಪಟ್ಟಂತೆ ಎಲ್ಲಾ ಆಯಾಮಗಳ ಕುರಿತು ಅಲಹಾಬಾದ್ ಹೈಕೋರ್ಟ್ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಹತ್ರಾಸ್ ಕೇಸಿಗೆ ಸಂಬಂಧಪಟ್ಟಂತೆ ಸಂತ್ರಸ್ತೆಯ ಕುಟುಂಬಸ್ಥರು ಮತ್ತು ಸಾಕ್ಷಗಳಿಗೆ ನೀಡಿರುವ ಭದ್ರತೆ ಸೇರಿದಂತೆ ಎಲ್ಲಾ ಆಯಾಮಗಳ ಕುರಿತು ಅಲಹಾಬಾದ್ ಹೈಕೋರ್ಟ್ ಇನ್ನು ಮುಂದೆ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೆ ಸಿಬಿಐ ಅಲಹಾಬಾದ್ ಹೈಕೋರ್ಟ್ ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಿತಿ ವರದಿಯನ್ನು ಸಲ್ಲಿಸಲಿದೆ ಎಂದು ಕೋರ್ಟ್ ತಿಳಿಸಿದೆ.
ಸಿಬಿಐ ತನಿಖೆಯನ್ನು ಅಲಹಾಬಾದ್ ಹೈಕೋರ್ಟ್ ನಿರ್ವಹಿಸಲಿದ್ದು, ಹತ್ರಾಸ್ ಕೇಸಿನ ವಿಚಾರಣೆಯನ್ನು ದೆಹಲಿಗೆ ವರ್ಗಾಯಿಸುವ ವಿಚಾರದಲ್ಲಿ ತನಿಖೆಯನ್ನು ಸಿಬಿಐ ಮುಗಿಸಿ ನಂತರ ಅದು ನಿರ್ಧರಿಸುವುದು ಉತ್ತಮ ಎಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ಪೀಠ ತಿಳಿಸಿದೆ.