Log In
BREAKING NEWS >
ಮಾ.5ರ೦ದು ಬೆಳಿಗ್ಗೆ 8ಗ೦ಟೆಗೆ ಪಣಿಯಾಡಿ ಶ್ರೀಅನ೦ತಪದ್ಮನಾಭ ದೇವಳದ ಗರ್ಭಗುಡಿಯ ಮಹಾದ್ವಾರದ ಹೊಸ್ತಿಲು ಸ್ಥಾಪನೆ ಕಾರ್ಯಕ್ರಮ ಜರಗಲಿದೆ....

ಕ್ರೀಡಾ ಸಾಧಕಿಗೆ ಐಜಿಪಿ ದೇವಜ್ಯೋತಿ ರಾಯ್ಅಭಿನಂದನೆ

ಉಡುಪಿ. ಅ. 28: ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಪು ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಅಮೃತೇಶ್ ಪುತ್ರಿ ತೃಷಾಗೆ ಐಜಿಪಿ ದೇವಜ್ಯೋತಿ ರಾಯ್ ಈಚೆಗೆ ಕಾಪು ವೃತ್ತ ಕಚೇರಿಯಲ್ಲಿ ಸನ್ಮಾನಿಸಿದರು.

ಉಡುಪಿ ಸೈಂಟ್ ಸಿಸಿಲಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ತೃಷಾ, ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದಾಳೆ.

2018- 19ನೇ ಸಾಲಿನಲ್ಲಿ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಯಲ್ಲಿ 400 ಮೀ. ಓಟವನ್ನು 1:02:77 ಸಮಯದಲ್ಲಿ ಪೂರೈಸಿ ರಾಜ್ಯ ಮಟ್ಟದ ದಾಖಲೆ ನಿರ್ಮಿಸಿದ್ದಳು. ಅಲ್ಲದೇ, ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಯಲ್ಲಿ 100 ಮೀ., 200 ಮೀ. ಹಾಗೂ 400 ಮೀ. ಓಟದಲ್ಲಿ ಬಹುಮಾನ ಪಡೆದಿದ್ದಾಳೆ.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಭರತ್ ರೆಡ್ಡಿ , ಡಿವೈಎಸ್ ಪಿ ಕಾರ್ಕಳ ಹಾಗೂ ಸಿಪಿಐ ಕಾಪು ಮಹೇಶ್ ಪ್ರಸಾದ್ ಇದ್ದರು.

No Comments

Leave A Comment