Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸ೦ಭ್ರಮದ ಲಕ್ಷದೀಪೋತ್ಸವ... ........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ ನಿಧನ

ಗಾಂಧಿನಗರ: ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.

ಕೇಶುಭಾಯ್ ಪಟೇಲ್ ಎರಡು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಕಳೆದ ಸೆಪ್ಟೆಂಬರ್ 30 ರಂದು ಸೋಮನಾಥ ಮಂದಿರ ಟ್ರಸ್ಟ್‌ ಅಧ್ಯಕ್ಷರಾಗಿ ಎರಡನೇ ಬಾರಿಗೆ ಚುನಾಯಿತರಾಗಿದ್ದರು.

ಜುಲೈ 24, 1930 ರಂದು ಜನಿಸಿದ್ದ ಕೇಶುಭಾಯ್ ಪಟೇಲ್, ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಾಗಿದ್ದರು. ಮಾರ್ಚ್ 1995 ರಿಂದ 1995 ರ ಅಕ್ಟೋಬರ್ ವರೆಗೆ ಮೊದಲ ಅವಧಿಗೆ ನಂತರ ಮಾರ್ಚ್ 1998 ರಿಂದ ಅಕ್ಟೋಬರ್ 2001 ರವರೆಗೆ ಎರಡನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.

2001 ರ ಗುಜರಾತ್‌ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿಸಿದಷ್ಟು ಸ್ಥಾನ ಗಳಿಸದ ಕಾರಣ ಕೇಶುಭಾಯ್ ಪಟೇಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

No Comments

Leave A Comment