Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ರಜೌರಿ: ಉಗ್ರರ ಅಡಗುದಾಣ ಧ್ವಂಸ, ಶಸ್ತ್ರಾಸ್ತ್ರ ವಶ

ಜಮ್ಮು: ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರ ಅಡಗುದಾಣ ಧ್ವಂಸಗೊಳಿಸಿ, ಚೀನಾದ ಪಿಸ್ತೂಲ್ ಮತ್ತು ಸ್ಫೋಟಕಗಳೂ ಒಳಗೊಂಡಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಿವೆ.

ಗಂಭೀರ್ ಮುಘಲನ್ ಅರಣ್ಯದ ಸಮೀಪ, ಜಮ್ಮು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್ ಯೋಧರು ಶುಕ್ರವಾರ ಉಗ್ರಗಾಮಿಗಳು ಅಡಗುತಾಣದಲ್ಲಿ ಇಟ್ಟುಕೊಂಡಿದ್ದ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೌರಿ ಚಂದನ್ ಕೊಹ್ಲಿ ಹೇಳಿದ್ದಾರೆ.

ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಜಮ್ಮು ಕಾಶ್ಮೀರ ಪೊಲೀಸರ ಸಹಯೋಗದೊಡನೆ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ಆರಂಭಿಸಿದ ಬಳಿಕ ಗಂಭೀರ್ ಮುಘಲನ್ ನ ದಟ್ಟಾರಣ್ಯವನ್ನು ಬಳಸಿ ಕಾಡಿನ ಮೇಲ್ಮೈ ಕೆಳಗೆ ರಚಿಸಲಾದ ಅಡಗುತಾಣವನ್ನು ಕಂಡುಕೊಂಡಿದ್ದಾರೆ.

No Comments

Leave A Comment