Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಚಿಟ್ಟಾಣಿ ಸಂಸ್ಮರಣಾ ಪ್ರಶಸ್ತಿ ಪ್ರದಾನ

ಉಡುಪಿ:ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ನಡೆಸಿಕೊಂಡು ಬಂದಿರುವ ಚಿಟ್ಟಾಣಿ ಸಂಸ್ಮರಣಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಸ್ತ್ರೀವೇಷಧಾರಿ ಶ್ರೀ ಮೂರೂರು ವಿಷ್ಣು ಭಟ್ಟರಿಗೂ, ಟಿ. ವಿ. ರಾವ್ ಪ್ರಶಸ್ತಿಯನ್ನು ಹವ್ಯಾಸಿ ಕಲಾವಿದ ಶ್ರೀ ಕೆ. ಅಜಿತ್ ಕುಮಾರ್ ಅಂಬಲಪಾಡಿ ಇವರಿಗೆ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಿದರು.
ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್, ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಕೆ. ಗಣೇಶ್ ರಾವ್, ಹೈಟೆಕ್ ಆಸ್ಪತ್ರೆಯ ನಿರ್ದೇಶಕ ಟಿ. ಎಸ್. ರಾವ್, ಸುಬ್ರಹ್ಮಣ್ಯ ಚಿಟ್ಟಾಣಿ, ಮುರಲಿ ಕಡೆಕಾರ್ ಉಪಸ್ಥಿತರಿದ್ದರು.

ಅಗಲಿದ ಹಿರಿಯ ಕಲಾವಿದ ಎಂ. ಆರ್ ವಾಸುದೇವ ಸಾಮಗರಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು.

ಡಾ. ತಲ್ಲೂರು ಶಿವರಾಮ ಶೆಟ್ಟಿ ಸ್ವಾಗತಿಸಿದರು, ಎಂ. ಗೋಪಿಕೃಷ್ಣ ರಾವ್ ವಂದಿಸಿದರು. ನಾರಾಯಣ ಎಂ ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಪ್ರಶಸ್ತಿಯು ರೂ. 10000/- ನಗದನ್ನು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.ಈ ಸಂದರ್ಭದಲ್ಲಿ ನಮ್ಮೆಲ್ಲರನ್ನೂ ಅಗಲಿದ ಮಹಾಮೇರು ಯಕ್ಷಗಾನ ಕಲಾವಿದರಾದ ಮಲ್ಪೆ ವಾಸುದೇವ ಸಾಮಗರಿಗೆ ನುಡಿ ನಮನವನ್ನು ಸಲ್ಲಿಸಲಾಯಿತು.

No Comments

Leave A Comment