Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಎಲ್ಒಸಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ಪಾಕ್ ಗುಂಡಿನ ದಾಳಿಗೆ 5 ಭಾರತೀಯ ಯೋಧರು ಹುತಾತ್ಮ, ಮೂವರು ನಾಗರೀಕರ ಸಾವು

ಶ್ರೀನಗರ: ದೀಪಾವಳಿ ಹಬ್ಬಕ್ಕೂ ಮುನ್ನಾ ದಿನವೇ ಗಡಿಯಲ್ಲಿ ಪಾಕಿಸ್ತಾನ ಸೇನೆ ರಕ್ತದೋಕುಳಿ ಹರಿಸಿದೆ. ಜಮ್ಮು ಮತ್ತು ಕಾಶ್ಮೀರದ ಗುರೇಜ್’ನಿಂದ ಉರಿ ವಲಯದವರೆಗೆ ಗಡಿಯಲ್ಲಿ ಪಾಕಿಸ್ತಾನ ಸೇನಾಪಡೆಯು ಕದನ ವಿರಾಮ ಉಲ್ಲಂಘಿಸಿದ್ದು, ಪಾಕಿಸ್ತಾನ ಸೇನೆ ನಡೆಸಿದ ಭಾರೀ ಗುಂಡಿನ ದಾಳಿಯಲ್ಲಿ ಐವರು ಯೋಧರು ಸೇರಿದಂತೆ 8 ಮಂದಿ ಬಲಿಯಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಗುರೇಜ್ ವಲಯದಿಂದ ಉರಿ ವಲಯದವರೆಗೂ ಪಾಕಿಸ್ತಾನ ಪಡೆಗಳು ಹವಾರು ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, ಮಾರ್ಟರ್ ಶೆಲ್’ಗಳು ಹಾಗೂ ಗುಂಡಿನ ದಾಳಿ ನಡೆಸಿವೆ.

ಉರಿ ವಲಯದ ನಂಬಾ ಎಂಬಲ್ಲಿ ನಿನ್ನೆ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಬಳಿಕ ಗುರೇಜ್ ಸೆಕ್ಟರ್ ನಲ್ಲಿ ಇಬ್ಬರು ಯೋಧರು ನಿನ್ನೆ ಹುತಾತ್ಮರಾಗಿದ್ದರು. ಘಟನೆಯಲ್ಲಿ ಕೆಲ ಯೋಧರಿಗೂ ಗಂಭೀರವಾಗಿ ಗಾಯಗಳಾಗಿದ್ದು, ಗಾಯಗೊಂಡಿದ್ದ ಯೋಧರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದರಲ್ಲಿ ಇದೀಗ ಓರ್ವ ಯೋಧ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ.

ಇನ್ನು ಕುಪ್ವಾರಾ ಜಿಲ್ಲೆಯ ಕೇರನ್ ವಲಯದಲ್ಲಿ ಉಗ್ರರು, ಪಾಕಿಸ್ತಾನದ ಭದ್ರತಾ ಪಡೆ ನಡೆಸಿದ ಕದನ ವಿರಾಮ ಉಲ್ಲಂಘಟನೆ ನೆರವು ಪಡೆದು ಒಳನುಸುಳಲು ಯತ್ನಿಸಿದ್ದರು. ಇದನ್ನು ಸೇನೆ ವಿಫಲಗೊಳಿಸಿದೆ.

ದಾವರ್, ಕೆರನ್, ಉರಿ ಮತ್ತು ನೌಗಾಮ್ ಸೇರಿದಂತೆ ಹಲವು ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಕದನ ಉಲ್ಲಂಘನೆ ಮಾಡಿದೆ. ಮಾರ್ಟಾರ್ ಶೆಲ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಬಳಸಿ ಪಾಕಿಸ್ತಾನ ಸೇನೆ ದಾಳಿ ನಡೆಸಿದೆ. ಉದ್ದೇಶಪೂರ್ವಕವಾಗಿ ಪಾಕಿಸ್ತಾನ ಪಡೆಗಳು ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ನಾಗರೀಕರು ಸಾವನ್ನಪ್ಪಿದ್ದಾರೆಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಡಿಯಲ್ಲಿದ್ದ ಎಲ್ಲಾ ಬಿಎಸ್ಎಫ್ ಘಟಕಗಳ ಮೇಲೂ ಪಾಕಿಸ್ತಾನ ಪಡೆಗಳು ದಾಳಿ ನಡೆಸಿವೆ. ದಾಳಿಯಲ್ಲಿ ಸಬ್ ಇನ್ಸ್ ಪೆಕ್ಟರ್ ರಾಕೇಶ್ ದೋವಲ್ (39) ಹುತಾತ್ಮರಾಗಿದ್ದಾರೆ. ಬಾರಾಮುಲ್ಲಾದಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ನಿನ್ನೆ ಮಧ್ಯಾಹ್ನ ಪಾಕಿಸ್ತಾನದ ಉದ್ದಟತನಕ್ಕೆ ರಾಕೇಶ್ ಅವರು ಬಲಿಯಾಗಿದ್ದಾರೆ. ಇಲ್ಲದದೆ ಬಿಎಸ್ಎಫ್ ಯೋಧ ವಾಸು ರಾಜ ಸೇರಿದಂತೆ ಮೂವರು ಯೋಧರೂ ಕೂಡ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಮಲ್ಕೋಟ್ ಸೆಕ್ಟರ್ ನಲ್ಲಿ ಇಬ್ಬರು ನಾಗರೀಕರು, ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment