Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ನಗ್ರೋಟಾ ಎನ್ಕೌಂಟರ್: ಪಾಕಿಸ್ತಾನ ರಾಯಭಾರಿಗೆ ಬುಲಾವ್, ಪ್ರಬಲ ಪ್ರತಿಭಟನೆ ವ್ಯಕ್ತಪಡಿಸಿದ ಭಾರತ

ನವದೆಹಲಿ: ನಗ್ರೋಟಾದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಘಟನೆಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿರುವ ಭಾರತ, ಪಾಕಿಸ್ತಾನ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿದೆ ಎಂದು ಶನಿವಾರ ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಯೋಜಿಸಿರುವ ಭಯೋತ್ಪಾದಕ ದಾಳಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಪಾಕಿಸ್ತಾನ ಕೂಡಲೇ ತನ್ನ ನೆಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಗ್ರರಿಗೆ ಬೆಂಬಲನೀಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದೆ.

ಭಾರತ ಸರ್ಕಾರ ದೇಶದ ಭದ್ರತೆಯನ್ನು ಕಾಪಾಡಲು ಎಲ್ಲಾ ರೀತಿಯ ಅಗತ್ಯಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದೆ.

ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆ ವೇಳೆ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ನಾಲ್ವರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಿಆರ್’ಪಿಎಫ್ ಯೋಧರು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿದ್ದರು.

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಜಮ್ಮು ನಗರದ ಹೊರವಲಯದ ಟೋಲ್ ಪ್ಲಾಜಾ ಬಳಿ ಪಾಕಿಸ್ತಾನದಿಂದ ಒಳನುಸುಳಿ ಬಂದಿದ್ದ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಗುರುವಾರ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ನಾಲ್ವರು ಉಗ್ರರನ್ನು ಭದ್ರತಾಪಡೆಗಳು ಹತ್ಯೆ ಮಾಡಿತ್ತು. ಘಟನೆಯಲ್ಲಿ ಇಬ್ಬರು ಪೊಲೀಸರು ಕೂಡ ಗಂಭೀರವಾಗಿ ಗಾಯಗೊಂಡಿದ್ದರು.

No Comments

Leave A Comment