Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಉಡುಪಿ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ವಿಜೃ೦ಭಣೆಯ “ವಿಶ್ವರೂಪದರ್ಶನ”

ಉಡುಪಿಯ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಭಾನುವಾರ(ಇಂದು) ಮುಂಜಾನೆ 5 ಕ್ಕೆ ಪಶ್ಚಿಮ ಜಾಗರ ಪೂಜೆ, ಸುಪ್ರಭಾತ , ಕಾಕಡ ಆರತಿ , ಶ್ರೀ ದೇವರ ಸನ್ನಿಧಿಯಲ್ಲಿ ಸಾವಿರಾರು ಹಣತೆಗಳ ದೀಪಗಳಿಂದ ಅಲಂಕೃತವಾದ ವಿಶ್ವ ರೂಪ ದರ್ಶನ ನೆರವೇರಿತು.

ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಶ್ರೀ ಮಹಾಕಾಳಿ ಅವತಾರ , ಗರುಡವಾಹನ , ರಂಗೋಲಿಯ ಚಿತ್ತಾರ, ಹೂಗಳಿಂದ ರಚಿಸಿದ ರಂಗೋಲಿಯಲ್ಲಿ ,ಹಣತೆಯ ದೀಪದಿಂದ ಓಂ , ಸ್ವಸ್ತಿಕ್, ಶಂಖ ಚಕ್ರ ಗಳನ್ನು ರಚಿಸಲಾಯತು.

ಪ್ರಧಾನ ದಯಘಾನ್ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಆಡಳಿತ ಮೊಕ್ತೇಸರರಾದ ಪಿ.ವಿ.ಶೆಣೈ , ಆಡಳಿತ ಮಂಡಳಿ ಸದಸ್ಯರಾದ ಗಣೇಶ್ ಕಿಣಿ, , ವಸಂತ್ ಕಿಣಿ, ಎ೦. ವಿಶ್ವನಾಥ್ ಭಟ್, ಮಟ್ಟಾರ್ ಗಣೇಶ್ ಕಿಣಿ , ಭಾಸ್ಕರ್ ಶೆಣೈ, ಶ್ಯಾಂಪ್ರಸಾದ್ ಕುಡ್ವ , ಪ್ರದೀಪ್ ರಾವ್, ಮಟ್ಟಾರ್ ಸತೀಶ್ ಕಿಣಿ ಮತ್ತು ಜಿ.ಸ್.ಬಿ. ಯುವಕ ಮಂಡಳಿ, ಮಹಿಳಾ ಮಂಡಳಿ ಸದಸ್ಯರು ಸಮಾಜ ಬಂದವರು ಉಪಸ್ಥಿತರಿದ್ದರು. ನೂರಾರು ಭಕ್ತರು ಸರತಿ ಸಾಲಿನಲ್ಲಿ ಬಂದು ಶ್ರೀ ದೇವರ ದರ್ಶನ ಪಡೆದರು.

No Comments

Leave A Comment