Log In
BREAKING NEWS >
ಉಡುಪಿ ನೂತನ ಡಿವೈಎಸ್ಪಿಯಾಗಿ ಸುಧಾಕರ್ ನಾಯಕ್ ಅಧಿಕಾರ ಸ್ವೀಕಾರ.....ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

ಪಂಜಾಬ್ ರೈತರಿಂದ ‘ದೆಹಲಿ ಚಲೋ’: ಗುಂಪು ಚದುರಿಸಲು ಪೊಲೀಸರಿಂದ ಜಲ ಫಿರಂಗಿ, ಅಶ್ರುವಾಯು ಪ್ರಯೋಗ

ಚಂಡೀಗಢ: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ದೆಹಲಿ ಚಲೋ ಚಳವಳಿ ಭಾಗವಾಗಿ ಪಂಜಾಬ್ ರೈತರು ಪೊಲೀಸ್ ಬ್ಯಾರಿಕೇಡ್ ಮುರಿದು ಹರ್ಯಾಣ ರಾಜ್ಯ ಪ್ರವೇಶಿಸಲು ಮುಂದಾದ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ ಪ್ರಸಂಗ ನಡೆದಿದೆ.

ಪಂಜಾಬ್-ಹರ್ಯಾಣ ಗಡಿಯ ಶಂಭು ಎಂಬಲ್ಲಿ ರೈತರು ಗುಂಪು ಸೇರಿ ದೆಹಲಿ ಚಲೋ ಆರಂಭಿಸಿ ಪೊಲೀಸ್ ಬ್ಯಾರಿಕೇಡ್ ತೆಗೆದು ನುಗ್ಗಲು ಪ್ರಯತ್ನಿಸುತ್ತಿದ್ದರು. ಆಗ ಹರ್ಯಾಣ ಪೊಲೀಸರು ಧ್ವನಿವರ್ಧಕ ಮೂಲಕ ಪ್ರತಿಭಟನಾಕಾರರಿಗೆ ಎಚ್ಚರಿಸುತ್ತಿದ್ದರು. ಈ ವೇಳೆ ಹರ್ಯಾಣ-ಪಂಜಾಬ್ ಶಂಭು ಅಂತರಾಜ್ಯ ಗಡಿಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪ್ರತಿಭಟನಾ ನಿರತ ರೈತರು ಗಗ್ಗರ್ ನದಿಗೆ ಎಸೆಯಲು ನೋಡಿದರು. ಕೆಲವರು ಕಪ್ಪು ಬಾವುಟ ಪ್ರದರ್ಶಿಸುತ್ತಿದ್ದರು.

ಪ್ರತಿಭಟನಾಕಾರರು ದೆಹಲಿಗೆ ತೆರಳದಂತೆ ಹರ್ಯಾಣ ಪೊಲೀಸರು ಹಲವು ಹಂತಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿದ್ದರು.

No Comments

Leave A Comment