ಆಸ್ಟ್ರೇಲಿಯಾಗೆ ಮರ್ಮಾಘಾತ, ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಏಕದಿನ, ಟಿ20 ಸರಣಿಯಿಂದ ಔಟ್
ಸಿಡ್ನಿ: ಭಾರತದ ವಿರುದ್ಧ ಏಕದಿನ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಕೈವಶ ಮಾಡಿಕೊಂಡಿರುವ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದ್ದು, ಗಾಯಕ್ಕೆ ತುತ್ತಾಗಿದ್ದ ತಂಡದ ಸ್ಫೋಟಕ ಬ್ಯಾಟ್ಸಮನ್ ಡೇವಿಡ್ ವಾರ್ನರ್ ಏಕದಿನ ಮತ್ತು ಟಿ20 ಸರಣಿಯಿಂದ ಔಟ್ ಆಗಿದ್ದಾರೆ.
ಹೌದು.. 2ನೇ ಏಕದಿನ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದ ಆಸಿಸ್ ನ ಸ್ಫೋಟಕ ಬ್ಯಾಟ್ಸಮನ್ ಡೇವಿಡ್ ವಾರ್ನರ್ ಭಾರತದ ವಿರುದ್ಧ ಬಾಕಿ ಉಳಿದಿರುವ ಏಕದಿನ ಪಂದ್ಯ ಹಾಗೂ ಟಿ20 ಸರಣಿಗೆ ಅಲಭ್ಯರಾಗಲಿದ್ದಾರೆ. ಈ ಬಗ್ಗೆ ಐಸಿಸಿ ಮಾಹಿತಿ ನೀಡಿದ್ದು, ವಾರ್ನರ್ ಮುಂದಿನ ಏಕದಿನ ಪಂದ್ಯ ಹಾಗೂ ಟಿ20 ಸರಣಿಯಿಂದ ದೂರ ಉಳಿದು ವಿಶ್ರಾಂತಿ ಪಡೆಲಿದ್ದಾರೆ. ಅವರ ಬದಲಿಗೆ ಡಿ-ಆರ್ಚಿ ತಂಡ ಸೇರಿಕೊಳ್ಳಲ್ಲಿದ್ದಾರೆ ಎಂದು ಮಾಹಿತಿ ನೀಡಿದೆ.