Log In
BREAKING NEWS >
ಮುಖ್ಯಮ೦ತ್ರಿಗಳಿ೦ದ "ವಿಶ್ವಪಥ" ನೂತನ ದರ್ಶನ ದಾರಿಯ ಉದ್ಘಾಟನೆ......ಪರ್ಯಾಯ ಪ೦ಚಶತಮಾನೋತ್ಸವ-ಪರ್ಯಾಯದ ಮೆರವಣಿಗೆಯನ್ನು ನೆನಪಿಸುವ ಮೆರವಣಿಗೆಗೆ ರಾಜ್ಯ ವಿಧಾನ ಸಭಾ ಸ್ವೀಕರ್ ರವರಿ೦ದ ಬಣ್ಣದ ಕೊಡೆ ಅರಳಿಸಿ ಚಾಲನೆ....

ಕೊರೋನಾ ಲಸಿಕೆಯನ್ನು ಮೊದಲಿಗೆ 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುತ್ತದೆ: ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ ಹೇಳಿಕೆ

ನವದೆಹಲಿ: ಕೊರೋನಾ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಮೊದಲಿಗೆ 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುತ್ತದೆ ಎಂದು ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ ಹೇಳಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಸರ್ವ ಪಕ್ಷ ಸಭೆಯನ್ನು ನಡೆಸಿದ್ದು, ಸಭೆಯಲ್ಲಿ ಎಲ್ಲಾ ರಾಜ್ಯಗಳ ಕೊರೋನಾ ಪರಿಸ್ಥಿತಿ ಕುರಿತಂತೆ ಹಾಗೂ ಕೊರೋನಾ ಲಸಿಕೆ ಕುರಿತು ಮಾತುಕತೆ ನಡೆಸಿದ್ದಾರೆ.

ಸಭೆಯಲ್ಲಿ ಮಾತನಾಡಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ದೇಶದಲ್ಲಿ ಕೊರೋನಾ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟ ಯಾವೆಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ವಿದೇಶಗಳು ಹಾಗೂ ಭಾರತದಲ್ಲಿ ತೆಗೆದುಕೊಂಡಿರುವ ಶಿಸ್ತುಕ್ರಮಗಳ ಕುರಿತು ಮಾತನಾಡಿದ್ದಾರೆ.

ಕೊರೋನಾ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಮೊದಲು ದೇಶದ 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ, ವೈದ್ಯರು ಹಾಗೂ ನರ್ಸ್’ಗಳಿಗೆ ವಿತರಿಸಲಾಗುತ್ತದೆ  ಎಂದು ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಇದಲ್ಲದೆ, ಪೊಲೀಸರು, ಸೇನಾ ಪಡೆಗಳು, ಪೌರಕಾರ್ಮಿಕರು ಹಾಗೂ ಇನ್ನಿತರೆ ಕಾರ್ಯಕರ್ತರೂ ಸೇರಿ ಒಟ್ಟು 2 ಕೋಟಿ ಜನರಿಗೂ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ.

ಐದು, ಅದಕ್ಕಿಂತ ಹೆಚ್ಚು ಸಂಸದರನ್ನು ಹೊಂದಿರುವ ಪ್ರಮುಖ ರಾಜಕೀಯ ಪಕ್ಷಗಳಿಂದ 13 ನಾಯಕರು ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಕಾಂಗ್ರೆಸ್ ಪರವಾಗಿ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಮಾತನಾಡಿದ್ದು, ಟಿಎಂಸಿ ಪರವಾಗಿ ಸುದೀಪ್ ಬಂಡೋಪಧ್ಯಾಯ, ಎನ್’ಸಿಪಿ ಪರವಾಗಿ ಶರದ್ ಪವಾರ್, ಟಿಆರ್’ಎಸ್ ಪರವಾಗಿ ನಾಮ ನಾಗೇಶ್ವರ್ ರಾವ್, ಶಿವಸೇನೆ ಪರವಾಗಿ ವಿನಾಯಕ್ ರಾವತ್ ಮಾತನಾಡಿದ್ದಾರೆಂದು ವರದಿಗಳು ತಿಳಿಸಿವೆ.

ಸರ್ವಪಕ್ಷ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಹರ್ಷವರ್ಧನ್ ಹಾಗೂ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು ಎಂದು ತಿಳಿದುಬಂದಿದೆ.

ಕೊರೋನಾ ಸಾಂಕ್ರಾಮಿಕ ಪಿಡುಗಿನ ಆರಂಭದಿಂದ ಕೇಂದ್ರ ಸರ್ಕಾರ ನಡೆಸುತ್ತಿರುವ 2ನೇ ಸರ್ವಪಕ್ಷ ಸಭೆ ಇದಾಗಿದೆ. ಭಾರತದಲ್ಲಿ ಕೊರೋನಾ ಲಾಕ್ಡೌನ್ ಜಾರಿಗೊಳಿಸುವುದಕ್ಕೂ ಮೊದಲು ಕಳೆದ ಏಪ್ರಿಲ್ ನಲ್ಲಿ ಸರ್ವಪಕ್ಷಗಳ ಸಭೆ ನಡೆಸಲಾಗಿತ್ತು.

No Comments

Leave A Comment