Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಜಮ್ಮು-ಕಾಶ್ಮೀರ: ಭದ್ರತಾಪಡೆಗಳ ಮೇಲೆ ಗ್ರೆನೇಡ್ ಎಸೆದ ಉಗ್ರರು, 7 ಮಂದಿ ನಾಗರೀಕರಿಗೆ ಗಂಭೀರ ಗಾಯ

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ 7 ಮಂದಿ ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಶನಿವಾರ ತಿಳಿದುಬಂದಿದೆ.

ಪುಲ್ವಾಮ ಜಿಲ್ಲೆಯ ತ್ರಾಲ್ ಬಸ್ ನಿಲ್ದಾಣದ ಬಳಿ ಬಂದಿರುವ ಉಗ್ರರು ಇದ್ದಕ್ಕಿದ್ದಂತೆ ಸ್ಥಳದಲ್ಲಿದ್ದ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ.

ಈ ವೇಳೆ ಇಬ್ಬರು ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ನಾಪತ್ತೆಯಾಗಿರುವ ಉಗ್ರರಿಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ವರದಿಗಳು ತಿಳಿಸಿವೆ.

No Comments

Leave A Comment