Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಬೂಟಾ ಸಿಂಗ್ ನಿಧನ ಕೇಂದ್ರ ಸಚಿವ ಹಾಗೂ ರಾ

ನವದೆಹಲಿ: ಕೇಂದ್ರ ಸಚಿವ ಹಾಗೂ ರಾಜಸ್ಥಾನದ ಮಾಜಿ ಸಂಸದ, ಕಾಂಗ್ರೆಸ್ ನಾಯಕ ಬೂಟಾ ಸಿಂಗ್ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೂಟಾ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಸಿಂಗ್ ಅವರಿಗೆ ಪತ್ನಿ, ಇಬ್ಬರು ಗಂಡು ಮತ್ತು ಮಗಳು ಇದ್ದಾರೆ. ಅವರು ಲೋಕಸಭಾ ಚುನಾವಣೆಯಲ್ಲಿ ಎಂಟು ಬಾರಿ ಗೆದ್ದಿದ್ದರು. ಗೃಹ, ಕೃಷಿ, ರೈಲ್ವೆ ಮತ್ತು ಇತರ ಸಚಿವರಾಗಿ ಪ್ರಮುಖ ಖಾತೆಗಳನ್ನು ಹೊಂದಿದ್ದರು.

ಜಲೋರ್-ಸಿರೋಹಿ ಸಂಸದೀಯ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದ ಬೂಟಾ ಸಿಂಗ್ ಅವರು, ಲಕ್ಷಾಂತರ ಬೆಂಬಲಿಗರನ್ನು ಹೊಂದಿದ್ದಾರೆ. ಬೂಟಾ ಸಿಂಗ್ ಕೇಂದ್ರ ಗೃಹ ಸಚಿವರಾಗಿ ಮತ್ತು ಬಿಹಾರ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ಅವರು 2007 ರಿಂದ 2010 ರವರೆಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾಗಿದ್ದರು.

ಅಕಾಲಿ ದಳದ ಸದಸ್ಯರಾಗಿ ತಮ್ಮ ಮೊದಲ ಚುನಾವಣೆಗಳಲ್ಲಿ ಸ್ಪರ್ಧಿಸಿದರು ಮತ್ತು 1960 ರ ದಶಕದ ಉತ್ತರಾರ್ಧದಲ್ಲಿ ಆ ಪಕ್ಷ ವಿಭಜನೆಯಾದ ಸಮಯದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಗೆ ಸೇರಿದರು. ರಾಜಕೀಯಕ್ಕೆ ಸೇರುವ ಮೊದಲು ಪತ್ರಕರ್ತರಾಗಿ ಕೆಲಸ ಮಾಡಿದ್ದರು.

ಬೂಟಾ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸಂತಾಪ

ಬೂಟಾ ಸಿಂಗ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಬೂಟಾ ಸಿಂಗ್ ಜೀ ಒಬ್ಬ ಅನುಭವಿ ಆಡಳಿತಗಾರ ಮತ್ತು ಬಡವರ ಕಲ್ಯಾಣಕ್ಕಾಗಿ, ದೀನ ದಲಿತರ ಧ್ವನಿಯಾಗಿದ್ದರು. ಅವರ ನಿಧನ ತೀವ್ರ ನೋವನ್ನುಂಟು ಮಾಡಿದೆ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ.

ಕಾಂಗ್ರೆಸ್ ನ ಹಿರಿಯ ನಾಯಕ ಬೂಟಾ ಸಿಂಗ್ ನಿಧನಕ್ಕೆ ಪಕ್ಷದ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಸರ್ದಾರ್ ಬುಟಾ ಸಿಂಗ್ ಅವರ ನಿಧನದೊಂದಿಗೆ ದೇಶವು ನಿಜವಾದ ಸಾರ್ವಜನಿಕ ಸೇವಕ ಮತ್ತು ಪ್ರಾಮಾಣಿಕ ನಾಯಕನನ್ನು ಕಳೆದುಕೊಂಡಿದೆ. ಅವರು ತಮ್ಮ ಇಡೀ ಜೀವನವನ್ನು ರಾಷ್ಟ್ರದ ಸೇವೆಗಾಗಿ ಮತ್ತು ಸಾರ್ವಜನಿಕರ ಸುಧಾರಣೆಗಾಗಿ ಅರ್ಪಿಸಿದರು ಮತ್ತು ಅವರನ್ನು ಯಾವಾಗಲೂ ನೆನಪಿಸಿಕೊಳ್ಳಲಾಗುತ್ತದೆ. ಕಷ್ಟದ ಸಮಯದಲ್ಲಿ ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪವಿದೆ ಎಂದು ಟ್ವೀಟ್ ಮಾಡಿದ್ದಾರೆ.

No Comments

Leave A Comment