Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ನಮ್ಮ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ

  ಶಿವಮೊಗ್ಗ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ನಮ್ಮ ಗುರಿ. ಗುರಿ ಇಟ್ಟು ಕೆಲಸ ಮಾಡಿದರೆ ಯಾವುದೂ ಅಸಾಧ್ಯವಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ನಡೆಯುತ್ತಿರುವ ಬಿಜೆಪಿ ಪಕ್ಷದ ವಿಶೇಷ ಸಭೆಯಲ್ಲಿ ಪಾಲ್ಗೊಂಡ ಸಿಎಂ ಮಾತನಾಡಿದ್ದಾರೆ.

“ಹಿರಿಯ ಧುರೀಣರಾದ ಜಗನ್ನಾಥರಾವ್​ ಜೋಶಿ, ಬಾಬುರಾವ್​ ದೇಶಪಾಂಡೆ ಮೊದಲಾದವರ ಪರಿಶ್ರಮದಿಂದ ಬಿಜೆಪಿ ಇಂದು ಅಧಿಕಾರಕ್ಕೇರಿದೆ. ಕಳೆದ 35-40 ವರ್ಷಗಳಿಂದ ಪಟ್ಟ ಶ್ರಮಕ್ಕೆ ಇಂದು ಪ್ರತಿಫಲ ಸಿಕ್ಕಿದೆ. ಇಂದು ಶಿವಮೊಗ್ಗದ ಅಂತಹಾ ಹಿರಿಯರನ್ನು ಕಾಣುವ ಅವಕ್ಶಾಸ ದೊರಕಿದೆ. ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ಕಾರ್ಯಕರ್ತರಲ್ಲಿ ತೃಪ್ತಿ ತಂದಿದೆ. ಇನ್ನು ಮುಂಬರುವ ದಿನಗಳಲ್ಲಿ ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಗೆಲುವು ಸಾಧಿಸುವುದಲ್ಲದೆ ವಿಧಾನಸಭೆ ಚುನಾವಣೆಯಲ್ಲಿ ಸಹ 150 ಸ್ಥಾನ ಗಳಿಸುವ ಗುರಿ ಹೊಂದಲಾಗಿದೆ” ಯಡಿಯೂರಪ್ಪ ಹೇಳಿದ್ದಾರೆ.

ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಕನಸಾಗಿದ್ದ ಗೋಹತ್ಯೆ ನಿಷೇಧ ಕಾನೂನು ಜಾರಿ್ ಅಂತಿಮ ಹಂತದಲ್ಲಿದೆ. “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020″ ಕಾಯ್ದೆಯನ್ನು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ. ತರುತ್ತಿದೆ,, ಈ ಮೂಲಕ ಅನೇಕ ಸಂಘಟಕರ ಉದ್ದೇಶ ಈಡೇರಿದೆ.  ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನಮ್ಮ ಬೆಂಬಲಿತ ವ್ಯಕ್ತಿಗಳು ಸಹಸ್ರ ಸಂಖ್ಯೆಯಲ್ಲಿ ಗೆದ್ದಿದ್ದಾರೆ, ಅವರಲ್ಲಿ ಹಲವರು ಪಂಚಾಯತ್ ಅಧ್ಯಕ್ಷರಾಗಲಿದ್ದಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿಟಿ ರವಿ, ಕೇಂದ್ರ ಸಚಿವರಾದ ಡಿವಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ  ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.

No Comments

Leave A Comment