Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಕೇಂದ್ರ ಸಚಿವ ಸದಾನಂದಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಅಸ್ವತ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಸದಾನಂದಗೌಡ ಅವರು ನಗರದ ಅಸ್ಟರ್ ಸಿಎಂಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಿಎಂ ಯಡಿಯೂರಪ್ಪ ಅವರು ಇಂದು ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಉಪ‌ ಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ ಹಾಗೂ ಸಮಾಜ ಕಲ್ಯಾಣ ಸಚಿವ ಬಿ.‌ ಶ್ರೀರಾಮುಲು ಅವರು ಸಹ ಸಿಎಂ ಜತೆಗಿದ್ದರು.

ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಬೆಂಗಳೂರಿಗೆ ಮರಳುತ್ತಿದ್ದಾಗ ಚಿತ್ರದುರ್ಗದಲ್ಲಿ ಸಚಿವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಚಿತ್ರದುರ್ಗದಲ್ಲಿರುವ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಚಿವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್‌ನಲ್ಲಿ ಜೀರೊ ಟ್ರಾಫಿಕ್‌ ಮೂಲಕ ಬೆಂಗಳೂರಿಗೆ ಕರೆ ತರಲಾಯಿತು.

No Comments

Leave A Comment