Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಸೇಡಂ ಮಾಜಿ ಶಾಸಕ ಬಸವಂತರೆಡ್ಡಿ ಪಾಟೀಲ ಇನ್ನಿಲ್ಲ

ಸೇಡಂ: ಸೇಡಂ ಮಾಜಿ ಶಾಸಕ ಬಸವಂತರೆಡ್ಡಿ ಪಾಟೀಲ (88) ನಿಧನರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಬಸವಂತರೆಡ್ಡಿ ನಿನ್ನೆ (ಜನವರಿ ೪) ಸಂಜೆ ಸೇಡಂನ ಮೋತಕಪಲ್ಲಿ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೋತಕಪಲ್ಲಿ ಗ್ರಾಮದ ಬಸವಂತರೆಡ್ಡಿ 1989 ಹಾಗೂ 1999 ಎರಡು ಬಾರಿ ಸೇಡಂ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾಗಿದ್ದರು.

1978 ರಲ್ಲಿ ರಾಜಕೀಯ ಪ್ರವೇಶ. ಮಾಡಿದ್ದ ಬಸವಂತರೆಡ್ಡಿಜನತಾ ಪಕ್ಷದಿಂದ ಸ್ಪರ್ಧಿಸಿದ್ದರು. 1988 ರಲ್ಲಿ ಮುಧೋಳ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದ ಇವರು  ಮಾಜಿ ಮುಖ್ಯಮಂತ್ರಿ  ಎಸ್.ಎಂ.ಕೃಷ್ಞ ಅವರ ಆಪ್ತ ಬಳಗದಲ್ಲಿ ಗುರುತಿಸಿ ಕೊಂಡಿದ್ದರು.  ಕಳೆದ ಹತ್ತು ವರ್ಷಗಳಿಂದೀಚೆಗೆ ಬಿಜೆಪಿ ಪಕ್ಷದಲ್ಲಿದ್ದರು.

ಮೃತರ ಅಂತ್ಯಕ್ರಿಯೆ ಸ್ವಂತ ಜಮೀನು *ಮೋತಕಪಲ್ಲಿ* ಗ್ರಾಮದಲ್ಲಿ ಇಂದು(5-1-21) *ಮಧ್ಯಾಹ್ನ 3* ಗಂಟೆಗೆ ನೆರೆವೆರಲಿದೆ.

ಮುಖ್ಯಮಂತ್ರಿ ಶೋಕ

ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ ಬಸವಂತರೆಡ್ಡಿ ಪಾಟೀಲ ಮೋತಕಪಲ್ಲಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಎರಡು ಬಾರಿ ಸೇಡಂ ಶಾಸಕರಾಗಿ ಸೇವೆ ಸಲ್ಲಿಸಿದ ಬಸವಂತರೆಡ್ಡಿ ಪಾಟೀಲರು ಸರಳ, ಸಜ್ಜನ ರಾಜಕಾರಣಿಯಾಗಿದ್ದರು.

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

No Comments

Leave A Comment