Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ನೂತನ ಕೃಷಿ ಕಾಯ್ದೆ ವಿರೋಧಿಸಿ, ರೈತರ ಪ್ರತಿಭಟನೆಗೆ ಸಂಬಂಧಿಸಿ ಅರ್ಜಿ ಸಲ್ಲಿಕೆ: ಜ.11ರಂದು ಸುಪ್ರೀಂ ಕೋರ್ಟ್ ವಿಚಾರಣೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇದೇ 11ರಂದು ಕೈಗೆತ್ತಿಕೊಳ್ಳಲಿದೆ. ಅವುಗಳಲ್ಲಿ ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳಿಗೆ ಸಂಬಂಧಪಟ್ಟ ಅರ್ಜಿಗಳು ಕೂಡ ಸೇರಿವೆ.

ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡು, ರೈತರ ಪ್ರತಿಭಟನೆಯಲ್ಲಿ ಯಾವುದೇ ಸುಧಾರಣೆ ಕಂಡಿಲ್ಲ, ಸರ್ಕಾರ ಮತ್ತು ರೈತ ಪ್ರತಿನಿಧಿಗಳ ಮಧ್ಯೆ ಆರೋಗ್ಯಕರ ಮಾತುಕತೆ ಮುಂದುವರಿಯುತ್ತಿದೆ ಎಂದು ಸರ್ಕಾರ ಹೇಳಿದೆ, ಈ ವಿಷಯದಲ್ಲಿ ಆದಷ್ಟು ಶೀಘ್ರವೇ ತೀರ್ಮಾನಕ್ಕೆ ಬರಬೇಕಾಗಿದೆ ಎಂದರು.

ಸದ್ಯದಲ್ಲಿಯೇ ಸರ್ಕಾರ ಮತ್ತು ರೈತರು ಒಂದು ತೀರ್ಮಾನಕ್ಕೆ ಬರಲು ಸಾಕಷ್ಟು ಉತ್ತಮ ಅವಕಾಶಗಳಿದ್ದು, ಹೊಸ ಕೃಷಿ ಕಾನೂನುಗಳನ್ನು ಪ್ರಶ್ನಿಸುವ ಮನವಿಯ ಕುರಿತು ಕೇಂದ್ರವು ಪ್ರತಿಕ್ರಿಯೆಯನ್ನು ಸಲ್ಲಿಸುವುದು ರೈತರು ಮತ್ತು ಸರ್ಕಾರದ ನಡುವಿನ ಮಾತುಕತೆಗಳನ್ನು ಮುನ್ಸೂಚಿಸಬಹುದು ಎಂದು ಅಟೊರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಹೇಳಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಆರೋಗ್ಯಕರ ವಾತಾವರಣದಲ್ಲಿ ಸರ್ಕಾರ ಮತ್ತು ರೈತರ ಮಧ್ಯೆ ಮಾತುಕತೆಗಳು ನಡೆಯುತ್ತಿದ್ದು, ಜನವರಿ 8ರಂದು ನಡೆಯಲಿರುವ 8ನೇ ಸುತ್ತಿನ ಮಾತುಕತೆಯಲ್ಲಿ ಹೊಸ ವಿಷಯಗಳು ಬರಲಿವೆ ಎಂದು ಹೇಳಿದರು.
ವಾದ-ವಿವಾದ ಆಲಿಸಿದ ಸುಪ್ರೀಂ ಕೋರ್ಟ್ ಕೃಷಿ ಕಾಯ್ದೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಜನವರಿ 11ಕ್ಕೆ ಮುಂದೂಡಿದೆ.

No Comments

Leave A Comment