Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ಜನತಾ ಪರಿವಾರ ಒಗ್ಗೂಡಿಸಲು ಯತ್ನ; ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುತ್ತಿದ್ದೇನೆ: ಸಿ.ಎಂ. ಇಬ್ರಾಹಿಂ

ಬೆಂಗಳೂರು: ರಾಷ್ಟ್ರ ಮಟ್ಟದಲ್ಲಿ ಜನತಾ ಪರಿವಾರ ಒಗ್ಗೂಡಿಸಲು ಎಲ್ಲ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಏನೋ ಆಗಬೇಕೆಂದು ಜೆಡಿಎಸ್‌ಗೆ ಹೋಗುತ್ತಿಲ್ಲ. ರಾಜ್ಯಕ್ಕೆ, ದೇಶಕ್ಕೆ ಏನಾದರೂ ಆಗಬೇಕು ಎಂದು ಹೋಗುತ್ತಿದ್ದೇನೆ. ಲಕ್ಷಾಂತರ ರೈತರು ಚಳಿಗಾಳಿ ಲೆಕ್ಕಿಸದೇ ಹೋರಾಟ ಮಾಡುತ್ತಿದ್ದಾರೆ. ಮುಂದೆ ರಾಜ್ಯದಲ್ಲೂ ಅದೆ ಪರಿಸ್ಥಿತಿ ಬರುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.

ಹಾಗೆಯೇ ಪ್ರಭಾಕರ್ ಕೋರೆ, ಉಮೇಶ್ ಕತ್ತಿ ಭೇಟಿಯಾಗಿದ್ದಾರೆ. ನಮ್ಮ ಟ್ರೈನ್  ಇನ್ನು ಶುರು ಮಾಡಿಲ್ಲ. ಶುರುವಾದ ನಂತರ ಹತ್ತಿಕೊಳ್ಳುವವರು ಬಂದು ಹತ್ತಿಕೊಳ್ಳುತ್ತಾರೆ. ನಾವು ಸಾಬ್ರು  ಹೊಸಗಾಡಿ ತೆಗೆದುಕೊಳ್ಳುವುದಿಲ್ಲ. ಹಳೆ ಗಾಡಿಯನ್ನೇ ರೆಡಿ ಮಾಡಿಸಿಕೊಳ್ಳುತ್ತೇವೆ  ಎಂದು ವ್ಯಂಗ್ಯವಾಡಿದರು.

ನಾನು ಕಾಂಗ್ರೆಸ್ ಪಕ್ಷವನ್ನು ಬಿಡುತ್ತಿದ್ದೇನೆ, ಬೇರೆ ಪಾರ್ಟಿಗೆ ಹೋಗುತ್ತಿದ್ದೇನೆ ಎಂಬ ಹೆದರಿಕೆ ನನಗಿಲ್ಲ. ನಾನು ಮನಸ್ಸು ಮಾಡಿದ್ದರೆ ಯಾವತ್ತೋ ಮುಸ್ಲಿಂ ಲೀಡರ್ ಆಗುತ್ತಿದ್ದೆ. ನನಗೆ ಈ ಬಗ್ಗೆ ಯಾವುದೇ ಆಸೆಗಳಿಲ್ಲ. ನಾನು ಮಹಿಮಾ ಪಟೀಲ್, ನಾಡಗೌಡರು ಎಲ್ಲರ ಜೊತೆ ಮಾತನಾಡಿದ್ದೇನೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.

No Comments

Leave A Comment