Log In
BREAKING NEWS >
ಉಡುಪಿ ನೂತನ ಡಿವೈಎಸ್ಪಿಯಾಗಿ ಸುಧಾಕರ್ ನಾಯಕ್ ಅಧಿಕಾರ ಸ್ವೀಕಾರ.....ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

ಬೆಂಗಳೂರು: ತುಂಡರಿಸಿ ಬಿದ್ದಿದ್ದ ವಿದ್ಯುತ್​ ತಂತಿ ತಗುಲಿ ವ್ಯಕ್ತಿ ಸಾವು

ಬೆಂಗಳೂರು: ನಗರದಲ್ಲಿ ಸುರಿದ ಮಳೆಯಿಂದಾಗಿ ತುಂಡರಿಸಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ತಿಲಕ್ ನಗರದ ಸಾಗರ್ ಅಪೋಲೊ ಆಸ್ಪತ್ರೆ ಬಳಿ ವರದಿಯಾಗಿದೆ.

41 ವರ್ಷದ ವೆಂಕಟೇಶ್ ಮೃತ ದುರ್ದೈವಿ. ವೆಂಕಟೇಶ್​, ಖಾಸಗಿ ಆಸ್ಪತ್ರೆ ಡಿ ಗ್ರೂಪ್ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು, ಬುಧವಾರ ಕೆಲಸ ಮುಗಿಸಿಕೊಂಡು ವಾಪಸ್ಸು ಮನೆಗೆ ತೆರಳುತ್ತಿದ್ದಾಗ ಈ ವೇಳೆ ಕತ್ತಲಲ್ಲಿ ಕಾಣದೇ ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ತಿಲಕ್ ನಗರದ ಸಾಗರ್ ಅಪೊಲೋ ಆಸ್ಪತ್ರೆ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್​​​ ತಂತಿ ತುಳಿದು ವೆಂಕಟೇಶ್​ ಅಸುನೀಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿದ್ದ ವೆಂಕಟೇಶ್ ನಿನ್ನೆ ಡ್ಯೂಟಿ ಮುಗಿಸಿ ಬರ್ತಿದ್ದರು.

ಬೆಂಗಳೂರಿನಲ್ಲಿ ರಾತ್ರಿಯಿಡೀ ಅಕಾಲಿಕ ಮಳೆ ಸುರಿದಿದೆ. ಉಡುಪಿ ಸೇರಿ ಕರಾವಳಿ ಜಿಲ್ಲೆಗಳು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗದಲ್ಲೂ ಮಳೆ ಆಗಿದೆ. ಇನ್ನೂ 3-4 ದಿನ ರಾಜ್ಯದ ಹಲವೆಡೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

No Comments

Leave A Comment