Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ನೂತನ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ಸಹಸ್ರಾರು ರೈತರಿಂದ ಟ್ರಾಕ್ಟರ್ ಮೆರವಣಿಗೆ!

ನವದೆಹಲಿ: ಮೂರು ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಸಿಂಗು, ಟಿಕ್ರಿ ಮತ್ತು ಘಾಜಿಪುರ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸ್ಥಳದಿಂದ   ಸಹಸ್ರಾರು ರೈತರು ಗುರುವಾರ ಟ್ರಾಕ್ಟರ್ ಮೆರವಣಿಗೆ ಪ್ರಾರಂಭಿಸಿದ್ದಾರೆ.

ಸುಮಾರು 3500 ಟ್ರಾಕ್ಟರ್ ಗಳು ಮತ್ತು ಟ್ರಾಲಿಗಳೊಂದಿಗೆ ರೈತರು ಈ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದಾಗಿ ಭಾರತಿ ಕಿಸಾನ್ ಯೂನಿಯನ್ (ಏಕ್ತಾ ಉಗ್ರಹಾನ್) ಮುಖ್ಯಸ್ಥ ಜೋಗಿಂದರ್ ಸಿಂಗ್ ಉಗ್ರಹಾನ್ ಹೇಳಿದ್ದಾರೆ.

ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಜನವರಿ 26 ರಂದು ಟ್ರಾಕ್ಟರ್ ಪರೇಡ್ ನಡೆಸಲು ಉದ್ದೇಶಿಸಲಾಗಿದ್ದು, ಇದು ಪೂರ್ವಭಾವಿ ತಾಲೀಮು ಎಂದು ಪ್ರತಿಭಟನಾನಿರತ ರೈತ ಯೂನಿಯನ್ ಗಳು ಹೇಳಿವೆ.

ಬೆಳಗ್ಗೆ 11 ಗಂಟೆಯಿಂದ ಟ್ರಾಕ್ಟರ್ ಮೆರವಣಿಗೆ ಆರಂಭವಾಗಿದ್ದು, ಕುಂಡ್ಲಿ, ಮನೇಸರ್, ಪಲ್ವಾಲಾ ಎಕ್ಸ್ ಪ್ರೆಸ್ ಕಡೆಗೆ ಸಾಗುತ್ತಿದ್ದು, ದೆಹಲಿ ಮತ್ತು ಹರಿಯಾಣ ಪೊಲೀಸರಿಂದ ಬಿಗಿ ಭದ್ರತೆ ಒದಗಿಸಲಾಗಿದೆ.

 ಹರಿಯಾಣದಿಂದ ಸುಮಾರು 2500 ಟ್ರಾಕ್ಟರ್ ಗಳು ಇಂದಿನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು, ಮುಂದಿನ ದಿನಗಳಲ್ಲಿ ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸಾಗುವುದು, ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಪ್ರತಿಭಟನೆಯನ್ನು ಮುಂದುವರೆಸಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹಿರಿಯ ಸದಸ್ಯ ಅಭಿಮನ್ಯು ಕೊಹಾರ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ನೂತನ ಕೃಷಿ ಕಾನೂನುಗಳ ರದ್ದತಿಗಾಗಿ ದೆಹಲಿಯ ಅನೇಕ ಗಡಿ ಪ್ರದೇಶಗಳಲ್ಲಿ ಪಂಜಾಬ್, ಹರಿಯಾಣ ಸೇರಿದಂತೆ ದೇಶದ ವಿವಿಧೆಡೆಗಳಿಂದ ಬಂದಿರುವ ಸಹಸ್ರಾರು ರೈತರು ಚಳಿ, ಮಳೆ ಎನ್ನದೇ ಟೆಂಟ್ ಗಳಲ್ಲಿ ವಾಸಿಸುತ್ತಾ ಕಳೆದ 40 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

No Comments

Leave A Comment