Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ಹಣ ವಂಚನೆ ಪ್ರಕರಣ: ಸಿಸಿಬಿ ಕಚೇರಿಗೆ ಹಾಜರಾದ ನಟಿ ರಾಧಿಕಾ ಕುಮಾರಸ್ವಾಮಿ

ಬೆಂಗಳೂರು: ಯುವರಾಜ್ ಸ್ವಾಮಿ ವಂಚನೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ನಟಿ ರಾಧಿಕಾ ಕುಮಾರಸ್ವಾಮಿಯವರು ಶುಕ್ರವಾರ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಹಾಜರಾಗಿದ್ದಾರೆ.

ಮನೆಯಿಂದ ಹೊರಡುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಧಿಕಾ ಕುಮಾರಸ್ವಾಮಿಯವರು, ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ತರಳುತ್ತಿದ್ದೇನೆ. ವಿಚಾರಣೆ ಪೂರ್ಣಗೊಂಡ ಬಳಿಕ ಪ್ರತಿಕ್ರಿಯೆ ನೀಡುತ್ತೇನೆಂದು ಹೇಳಿದ್ದಾರೆ.

ಆರ್‌ಎಸ್‌ಎಸ್ ಮುಖಂಡ ಎಂದು ಹೇಳಿಕೊಂಡು, ವಿವಿಧ ನಿಗಮಗಳ ಅಧ್ಯಕ್ಷ ಸ್ಥಾನ ಕೊಡಿಸುತ್ತೇನೆ, ರಾಜ್ಯದ ರಾಜ್ಯಪಾಲರನ್ನಾಗಿ ಮಾಡುತ್ತೇನೆ ಎಂದೆಲ್ಲಾ ಹೇಳಿ ಹಲವರಿಂದ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಿ ಯುವರಾಜ್ ಸ್ವಾಮಿಯನ್ನು ಕೆಲ ದಿನಗಳ ಹಿಂದಷ್ಟೇ ಬಂಧನಕ್ಕೊಳಪಡಿಸಲಾಗಿತ್ತು.

ಆರೋಪಿ ಯುವರಾಜ್ ಸ್ವಾಮಿಯನ್ನು ವಿಚಾರಣೆಗೆ ಒಳಪಡಿಸಿದ ವೇಳೆ ಆತನ ಖಾತೆಯಿಂದ ರಾಧಿಕಾ ಕುಮಾರಸ್ವಾಮಿ ಖಾತೆಗೆ ಲಕ್ಷಾಂತರ ಹಣ ಸಂದಾಯವಾಗಿರುವುದು ತಿಳಿದುಬಂದಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್‌ ಅವರ ವಿಚಾರಣೆ ನಡೆಸಿರುವ ಸಿಸಿಬಿ. ರಾಧಿಕಾ ಕುಮಾರಸ್ವಾಮಿ ಅವರಿಗೂ ನಿನ್ನೆಯಷ್ಟೇ ಸಮನ್ಸ್ ಮಾಡಿತ್ತು.

No Comments

Leave A Comment