Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ಮಹಾರಾಷ್ಟ್ರ: ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ, 10 ಮಕ್ಕಳ ಸಾವು

ಮುಂಬೈ: ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 10 ಮಕ್ಕಳು ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದ್ದು, ರಾತ್ರಿ 2 ಗಂಟೆ ಸುಮಾರಿಗೆ ನವಜಾತ ಶಿಶುಗಳಿದ್ದ ತೀವ್ರ ನಿಗಾಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ  ಬೆಂಕಿಯ ಕೆನ್ನಾಲಿಗೆ ಇಡೀ ವಾರ್ಡ್‌ ವ್ಯಾಪಿಸಿದ್ದು, ವಾರ್ಡ್ ನಲ್ಲಿದ್ದ 10 ಮಕ್ಕಳು ಸಾವನ್ನಪ್ಪಿವೆ.

ಬೆಂಕಿ ಗೋಚರವಾಗುತ್ತಿದ್ದಂತೆಯೇ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾದರು. ಅಲ್ಲದೆ ಶಿಶುಗಳನ್ನು ಬೇರೆಡೆ ರವಾನೆ ಮಾಡುವ ಕಾರ್ಯ ಮಾಡಿದರಾದರೂ, ಅಷ್ಟುಹೊತ್ತಿಗಾಗಲೇ ಬೆಂಕಿ ಕ್ಷಣಮಾತ್ರದಲ್ಲಿ ಇಡೀ ವಾರ್ಡ್ ಅನ್ನು ವ್ಯಾಪಿಸಿತು. ಪರಿಣಾಮ 10 ಮಕ್ಕಳು ಸಾವನ್ನಪ್ಪಿದ್ದರು. ಸಿಬ್ಬಂದಿಗಳ  ಹರಸಾಹಸದಿಂದಾಗಿ 7 ಮಕ್ಕಳನ್ನು ರಕ್ಷಿಸಲಾಗಿದೆ.  ಮೃತಪಟ್ಟ ಮಕ್ಕಳು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಕಿ ಕಾಣಿಸಿಕೊಂಡುರಿವುದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಎಂದು  ಹೇಳಲಾಗುತ್ತಿದೆ. ಈ ಕುರಿತು ತನಿಖೆ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

3 ಮಕ್ಕಳು ಬೆಂಕಿಗಾಹುತಿ, 7 ಮಕ್ಕಳು ಉಸಿರುಗಟ್ಟಿ ಸಾವು
ಇನ್ನು ಈ ಕುರಿತಂತೆ ಮಾಹಿತಿ ನೀಡಿದ ಮಹಾರಾಷ್ಟ್ರ ಆರೋಗ್ಯ ಸಚಿವಾಲಯ ದುರ್ಘಟನೆಯಲ್ಲಿ ಒಟ್ಟು 10 ಮಕ್ಕಳು ಸಾವನ್ನಪ್ಪಿದ್ದು, 3 ಮಕ್ಕಳು ಬೆಂಕಿಗಾಹುತಿದಿವೆ. ಉಳಿದ 7 ಮಕ್ಕಳು ಬೆಂಕಿಯಿಂದ ಉಂಟಾದ ಹೊಗೆಯಿಂದಾಗಿ ಉಸಿರುಗಟ್ಟಿ ಸಾವನ್ನಪ್ಪಿವೆ ಎಂದು ಮಾಹಿತಿ ನೀಡಿದೆ.

No Comments

Leave A Comment