Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ಬಿಬಿಎಂಪಿ ವಿಧೇಯಕ-2020ಕ್ಕೆ ರಾಜ್ಯಪಾಲರ ಅಂಕಿತ: ಜನವರಿ 11ರಿಂದ ಹೊಸ ಆಡಳಿತ ಜಾರಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಆಡಳಿತ ವ್ಯವಸ್ಥೆಯನ್ನು ಬದಲಾವಣೆ ಮಾಡುವಂತಹ ಮಹತ್ವದ ಮಸೂದೆ ಬಿಬಿಎಂಪಿ ವಿಧೇಯಕ-2020ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಜ.11ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

ವಿಧಾನಸಭೆ ಮತ್ತು ವಿಧಾನಪರಿಷತ್‍ನ ಎರಡು ಅಧಿವೇಶನದಲ್ಲಿ ಸುದೀರ್ಘವಾಗಿ ಚರ್ಚೆಯಾಗಿ ಜಂಟಿ ಪರಿಶೀಲನಾ ಸಮಿತಿಯ ಪರಿಶೀಲನೆಗೆ ಒಳಪಟ್ಟು ಅಂತಿಮವಾಗಿ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿನಿಯಮ 2020ಕ್ಕೆ ರಾಜ್ಯಪಾಲರಾದ ವಜುಭಾಯಿ ವಾಲಾ ಸಹಿ ಹಾಕಿದ್ದಾರೆ.

ನೂತನ ಕಾಯ್ದೆ ಜ.11ರಿಂದ ಜಾರಿಗೆ ಬರಲಿದೆ ಎಂದು ನಗರಾಭಿವೃದ್ಧಿ ಇಲಾಖೆ ಅಧಿಕೃತ ಪ್ರಕಟಣೆ ತಿಳಿಸಿದೆ. ನೂತನ ಕಾಯ್ದೆ ಬೆಂಗಳೂರಿನ ದೂರಗಾಮಿ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪುಗೊಂಡಿದ್ದು, ಆಡಳಿತ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರಲಿದೆ.

ಬಿಬಿಎಂಪಿಗೆ ಇನ್ನು ಮುಂದೆ 8 ವಲಯಗಳಿಗೂ ಪ್ರತ್ಯೇಕ ಆಯುಕ್ತರನ್ನು ನೇಮಿಸಲಾಗುತ್ತದೆ. ಕೇಂದ್ರ ಕಚೇರಿಯಲ್ಲಿ ಈಗಿರುವ ಆಯುಕ್ತರು ಇನ್ನು ಮುಂದೆ ಮುಖ್ಯ ಆಯುಕ್ತರಾಗಿ ಕೆಲಸ ಮಾಡಲಿದ್ದಾರೆ.

ವಾರ್ಡ್‍ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಹೆಚ್ಚಿಸಲು ಇದೇ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆಡಳಿತಾತ್ಮಕವಾಗಿ ಹಲವಾರು ಮಹತ್ವದ ಬದಲಾವಣೆಗಳನ್ನು ಅಳವಡಿಸಲಾಗುತ್ತಿದ್ದು, ಇನ್ನು ಮುಂದೆ ಬೆಂಗಳೂರಿನ ಸಮಗ್ರ ಅಭಿವೃದ್ಧಿಯಾಗಲಿದೆ ಎಂಬ ನಿರೀಕ್ಷೆಗಳಿವೆ.

ಬೃಹನ್ ಮುಂಬೈ ನಗರ ಪಾಲಿಕೆಯು ಸುಮಾರು 603 ಚದರ ಕಿಮೀ ವ್ಯಾಪ್ತಿಯೊಂದಿಗೆ 227 ವಾರ್ಡ್ ಸದಸ್ಯ ಬಲದೊಂದಿಗೆ 2ನೇ ಸ್ಥಾನ, ಗುಜರಾತ್’ನ ಅಹಮದಾಬಾದ್ ಸುಮಾರು 505 ಚ ಕಿಮೀ. 192 ವಾರ್ಡ್ ನೊಂದಿಗೆ ತೃತೀಯ ಸ್ಥಾನದಲ್ಲಿವೆ.

ಇನ್ನು ಬಿಬಿಎಂಪಿ ಗಡಿಗೆ ಹೊಂದಿಕೊಂಡ 1 ಕಿಮೀ ವ್ಯಾಪ್ತಿಯ ಹಾಗೂ ಅಜುಬಾಜಿನ ಪ್ರದೇಶಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಂಡು ವಾರ್ಡ್ ಪುನರ್ ವಿಂಗಡಿಸುವುದು ಹಾಗೂ ಮೇಯರ್, ಉಪ ಮೇಯರ್ ಅಧಿಕಾರಾವಧಿಯನ್ನು 1 ವರ್ಷದಿಂದ 30 ತಿಂಗಳಿಗೆ ವಿಸ್ತರಿಸುವುದು ಸೇರಿದಂತೆ ಮಹತ್ವದ ಅಂಶಗಳುಳ್ಳ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಧೇಯಕ-2020ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

No Comments

Leave A Comment