Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ಮಧ್ಯಪ್ರದೇಶ: ನಕಲಿ ಮದ್ಯ ಸೇವಿಸಿ 10 ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲು

ಭೋಪಾಲ್: ಮಧ್ಯಪ್ರದೇಶದ ಮೊರೋನಾ ಜಿಲ್ಲೆಯಲ್ಲಿ 2 ಗ್ರಾಮದಲ್ಲಿ ನಕಲಿ ಮದ್ಯ ಸೇವನೆ ಮಾಡಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ನಡೆದಿದೆ.

ಮೊರೋನಾ ಜಿಲ್ಲೆಯ ಮಾನ್ಪುರಿ ಪೃಥ್ವಿ ಮತ್ತು ಪಹಾವಾಲಿ ಗ್ರಾಮಗಳಲ್ಲಿ ಈ ಸಾವು ಸಂಭವಿಸಿದೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಐಜಿಪಿ ಮನೋಜ್ ಶರ್ಮಾ ಅವರು ಹೇಳಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮನ್ಪುರಿ ಪೃಥ್ವಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಕಲಿ ಮದ್ಯ ಸೇವನೆ ಮಾಡಿದ್ದ ಹಲವರು ಇದ್ದಿಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ಕೂಡಲೇ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, 10 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.

10 ಮಂದಿಯಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೂವರನ್ನು ಬಂಟಿ, ಜಿತೇಂದ್ರ ಗುರ್ಜಾರ್, ರಾಮ್ನಿವಾಸ್ ಗುರ್ಜಾರ್ ಎಂದು ಗುರ್ತಿಸಲಾಗಿದೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಧ್ಯಪ್ರದೇಶ ಸಚಿವ ನರೋತ್ತಮ್ ಮಿಶ್ರಾ ಅವರು, ಘಟನೆ ಸಾಕಷ್ಟು ನೋವು ತಂದಿದೆ. ಈ ಸಂಬಂಧ ಆರೋಗ್ಯಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಈಗಾಗಲೇ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣ ತನಿಖೆ ನಡೆಸಲು ತಂಡವನ್ನು ರಚನೆ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

No Comments

Leave A Comment