Log In
BREAKING NEWS >
ಉಡುಪಿ ನೂತನ ಡಿವೈಎಸ್ಪಿಯಾಗಿ ಸುಧಾಕರ್ ನಾಯಕ್ ಅಧಿಕಾರ ಸ್ವೀಕಾರ.....ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

ಜ.28ರಿಂದ ವಿಧಾನಮಂಡಲ ಜಂಟಿ ಅಧಿವೇಶನ, ಮಾರ್ಚ್ ನಲ್ಲಿ ಬಜೆಟ್ ಅಧಿವೇಶನ: ಸಂಪುಟ ತೀರ್ಮಾನ

ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಜನವರಿ ೨೮ ರಿಂದ ಫೆಬ್ರವರಿ ೫ ರವರೆಗೆ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಬುಧವಾರ ತೀರ್ಮಾನಿಸಿದೆ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಸಂಪ್ರದಾಯದಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಜನವರಿ 28ರಂದು ವಿಧಾನಮಂಡಲದ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದರು.

ಮಾರ್ಚ್ ನಲ್ಲಿ ಬಜೆಟ್ ಅಧಿವೇಶ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆದರೆ ಅದಕ್ಕೆ ದಿನಾಂಕ ನಿಗದಿ ಮಾಡಿಲ್ಲ ಎಂದು ಮಾಧುಸ್ವಾಮಿ ಅವರು ತಿಳಿಸಿದರು.

No Comments

Leave A Comment