Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

ಧಾರವಾಡ ಬಳಿ ಅಫಘಾತದಲ್ಲಿ 11 ಮಂದಿ ದುರ್ಮರಣ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಧಾರವಾಡ: ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 11 ಮಂದಿ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ವೇಳೆ ಟಿಪ್ಪರ್‌ವೊಂದು ಡಿಕ್ಕಿ ಹೊಡೆದಿದೆ ಪರಿಣಾಮ 10 ಮಹಿಳೆಯರು ಸೇರಿ ಒಟ್ಟು 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಿಂದಾಗಿ ಟೆಂಪೋ ಟ್ರಾವೆಲರ್‌ ಹಾಗೂ ಟಿಪ್ಪರ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಧಾರವಾಡದಿಂದ ಸುಮಾರು 8 ಕಿಮೀ ದೂರದಲ್ಲಿರು ಇಟ್ಟಿಗಟ್ಟಿ ಎಂಬ ಸ್ಥಳದಲ್ಲಿ ಅಪಘಾತ ಸಂಭವಿಸಿದೆ.ಅಪಘಾತದ ಭೀಕರತೆಗೆ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಗಾಯಗೊಂಡ ಆರು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ,

ಗಾಯಗೊಂಡವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲು ಹಲವು ಸಮಯದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಧಾರವಾಡದಲ್ಲಿ ನಡೆದ ಅಪಘಾತದಲ್ಲಿ 11ಸಾವನಪ್ಪಿದ  ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ, ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

No Comments

Leave A Comment