Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಮಂಗಳೂರು-ತಿರುವನಂತಪುರಂ ರೈಲಿನಲ್ಲಿ ಬೆಂಕಿ, ಪ್ರಯಾಣಿಕರ ಎಚ್ಚರಿಕೆಯಿಂದ ತಪ್ಪಿದ ಅನಾಹುತ

ಮಂಗಳೂರು:  ಮಂಗಳೂರು-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಇಂದು(ಭಾನುವಾರ) ಬೆಳಿಗ್ಗೆ 7.45 ರ ಸುಮಾರಿಗೆ ಈ ಘಟನೆ ನಡೆದಿದೆ.

ಪ್ರಕರಣದಲ್ಲಿ ಈವರೆಗೆ ಯಾವ ಗಾಯದ ವರದಿಯಾಗಿಲ್ಲ  ಆದರೆ ಸರಕುಗಳಿದ್ದ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ರೈಲು ತಿರುವನಂತಪುರದ ವರ್ಕಳ ತಲುಪಿದ ವೇಳೆ ಬೆಂಕಿಯನ್ನು ಗಮನಿಸಿದ ರೈಲಿನಲ್ಲಿದ್ದ ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದು ರೈಲು ನಿಲ್ಲಿಸಿದ್ದಾರೆ. ಇದರಿಂದಾಗಿ ದೊಡ್ಡ ದುರಂತ ತಪ್ಪಿದಂತಾಗಿದೆ.

ಬೆಂಕಿ ಹಬ್ಬಿದ್ದ ಬೋಗಿಯನ್ನು ಇತರೆ ಬೋಗಿಗಳಿಂದ ಬೇರ್ಪಡಿಸಲಾಗಿದೆ.

Image

ಬೆಂಕಿಯನ್ನು ನಂದಿಸಲು ಸ್ಥಳೀಯರು, ರೈಲು ಪ್ರಯಾಣಿಕರುಮತ್ತು ಅಗ್ನಿಶಾಮಕ ಸಿಬ್ಬಂದಿ ಒಟ್ಟಾಗಿ ಕಾರ್ಯಾಚರಣೆ ನಡೆಸಿದ್ದಾರೆ. ತುಸು ವೇಳೆಯಲ್ಲೇ ಬೆಂಕಿ ನಂದಿರುವ ಬಗ್ಗೆ ಮಾಹಿತಿ ಬಂದಿದ್ದು ರೈಲಿನಲ್ಲಿರುವ ಎಲ್ಲಾ ಪ್ರಯಾಣಿಕರು ಸುರಕ್ಷಿತ ವಾಗಿದ್ದಾರೆ ಎಂದು ವರದಿಯಾಗಿದೆ.

No Comments

Leave A Comment