BREAKING NEWS >
ನ.29ರ೦ದು ಶ್ರೀಕ್ಷೇತ್ರಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರ೦ಭ...

ರಾಮ ಮಂದಿರ ನಿರ್ಮಾಣಕ್ಕೆ ಮೂರೇ ದಿನದಲ್ಲಿ 100 ಕೋಟಿ ರೂ. ದೇಣಿಗೆ ಸಂಗ್ರಹ!

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಕಾರ್ಯಕ್ಕೆ ಮೂರು ದಿನಗಳ ಹಿಂದೆ ಚಾಲನೆ ನೀಡಲಾಗಿತ್ತು.

ಇತ್ತೀಚಿನ ಮಾಹಿತಿಯ ಪ್ರಕಾರ ಮೂರು ದಿನಗಳಲ್ಲಿ ದೇಶಾದ್ಯಂತ 100 ಕೋಟಿ ರೂಪಾಯಿಗಳ ದೇಣಿಗೆ ಸಂಗ್ರಹವಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ.

ಎಎನ್ಐಗೆ ಮಾಹಿತಿ ನೀಡಿರುವ ರಾಯ್, ಟ್ರಸ್ಟ್ ಗೆ ದತ್ತಾಂಶ ಈವರೆಗೂ ಅಧಿಕೃತವಾಗಿ ಲಭ್ಯವಾಗಿಲ್ಲ. ಆದರೆ ನಮ್ಮ ಕಾರ್ಯಕರ್ತರು ನೀಡಿರುವ ಮಾಹಿತಿಯ ಪ್ರಕಾರ ಈ ವರೆಗೂ 100 ಕೋಟಿ ರೂಪಾಯಿ ಸಂಗ್ರಹ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕಾಗಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡುವ ಅಭಿಯಾನಕ್ಕೆ ಜ.15 ರಿಂದ ದೇಶಾದ್ಯಂತ ಚಾಲನೆ ನೀಡಲಾಗಿತ್ತು. ಈ ಅಭಿಯಾನ ಫೆ.27 ವರೆಗೆ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕಾಗಿ 5,00,100 ರೂಪಾಯಿಗಳ ದೇಣಿಗೆ ನೀಡಿದ್ದರು.

No Comments

Leave A Comment