BREAKING NEWS >
ನ.29ರ೦ದು ಶ್ರೀಕ್ಷೇತ್ರಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರ೦ಭ...

ತೀವ್ರ ಉಸಿರಾಟದ ಸೋಂಕು: ವಿಕೆ ಶಶಿಕಲಾ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್!

ಬೆಂಗಳೂರು: ತೀವ್ರ ಉಸಿರಾಟದ ಸೋಂಕು ಹಿನ್ನಲೆಯಲ್ಲಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ವಿಕೆ ಶಶಿಕಲಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಕೆ ಶಶಿಕಲಾ ಅವರಿಗೆ ತೀವ್ರ ಉಸಿರಾಟದ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ನಗರದ ಬೌರಿಂಗ್ ಆಸ್ಪತ್ರೆಯ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.  ಇದೀಗ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ. ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಅವರು ಸೆರೆವಾಸ ಮುಗಿಸಿ ಜನವರಿ 27ಕ್ಕೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಆದರೆ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲೇ ಆರೋಗ್ಯದಲ್ಲಿ ಏರುಪೇರಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ನಾಲ್ಕು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ಅವರು ಜನವರಿ 27ರಂದು ಬಿಡುಗಡೆಯಾಗುವ ಸಾಧ್ಯತೆ ಇದ್ದು, ಕೆಲವೇ ತಿಂಗಳಲ್ಲೇ ವಿಧಾನಸಭೆ ಚುನಾವಣೆ ಎದುರಿಸಲಿರುವ ತಮಿಳುನಾಡಿನ ರಾಜಕೀಯದಲ್ಲಿ ಶಶಿಕಲಾ ಬಿಡುಗಡೆ ಸಂಚಲನ ಸೃಷ್ಟಿ ಮಾಡುವ ಸಾಧ್ಯತೆ ಇದೆ.

No Comments

Leave A Comment