Log In
BREAKING NEWS >
ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ....

ಕೊರೋನಾ ಲಸಿಕೆ: ನಗರದಲ್ಲಿ ಈವರೆಗೆ 22 ಮಂದಿಗೆ ಅಡ್ಡ ಪರಿಣಾಮ

ಬೆಂಗಳೂರು: ನಗರದಲ್ಲಿ ಗುರುವಾರ 23 ಸರ್ಕಾರಿ ಹಾಗೂ ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು 92 ಖಾಸಗಿ ಆಸ್ಪತ್ರೆಗಳ ಲಸಿಕಾ ಕೇಂದ್ರದಲ್ಲಿ 5,.410 ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕೆ ಪಡೆದುಕೊಂಡಿದ್ದು, ಈ ಪೈಕಿ 22 ಮಂದಿಯಲ್ಲಿ ಲಸಿಕೆಯ ಅಡ್ಡ ಪರಿಣಾಮ ಕಾಣಿಸಿಕೊಂಡಿದೆ.

ಗುರುವಾರ ಸರ್ಕಾರಿ ಮತ್ತು ಬಿಬಿಎಂಪಿಯ 2,328 ಮಂದಿ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಈ ಪೈಕಿ ಸರ್ಕಾರಿ ಹಾಗೂ ಪಾಲಿಕೆಯ 1,027 ಹಾಗೂ ಖಾಸಗಿ ಆಸ್ಪತ್ರೆಯ 4,383 ಆರೋಗ್ಯ ಕಾರ್ಯಕರ್ತರು ಸೇರಿದಂತೆ ಒಟ್ಟು 5,410 (ಶೇ.52) ಮಂದಿ ಮಾತ್ರ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಪಡೆದುಕೊಂಡವರಲ್ಲಿ 22 ಮಂದಿಗೆ ಜ್ವರ, ತಲೆನೋವು, ಸುಸ್ತು ಸೇರಿದಂತೆ ಇನ್ನಿತರೆ ಅಡ್ಡಪರಿಣಾಮ ಕಾಣಿಸಿಕೊಂಡಿದೆ ಎಂದು ಬಿಬಿಎಂಪಿ ತಿಳಿಸಿದೆ.

No Comments

Leave A Comment