Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ; 9 ಕಾರ್ಮಿಕರ ಸಾವು

ಹೈದರಾಬಾದ್​: ನೆರೆಯ ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೂಲಿ ಕೆಲಸಕ್ಕೆ ಹೋಗುತ್ತಿದ್ದ 9 ಕಾರ್ಮಿಕರು ಸಾವನ್ನಪ್ಪಿದ್ದಾರೆ.

ತೆಲಂಗಾಣದ ನಲ್ಗೊಂಡ ಜಿಲ್ಲೆಯ ದೇವರಕೊಂಡಮಂಡಲದ ಪೆದ್ದಅಡಿಶರ್ಲಪಲ್ಲಿಯ ಅಂಗಡಿಪೇಟ್ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು,  ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಆಟೋ ಕಂಟೇನರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ  9 ಮಂದಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತಪಟ್ಟ ಕಾರ್ಮಿಕರೆಲ್ಲರೂ ಚಿಂತಬಾವಿ ಗ್ರಾಮದ ನಿವಾಸಿಗಳಾಗಿದ್ದು, ಕೂಲಿ ಕೆಲಸ ಮುಗಿಸಿಕೊಂಡು ಆಟೋದಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಹಲವರಿಗೆ ಗಂಭೀರಗಾಯಗಳಾಗಿದ್ದು, ಎಲ್ಲರನ್ನೂ ದೇವರಕೊಂಡ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತರನ್ನು ‌ಆಟೊ ಚಾಲಕ‌ ಮಲ್ಲೇಶ, ಕೂಲಿಗಳಾದ ನೋಮಲ ಪೆದ್ದಮ್ಮ, ನೋಮಲ ಸೈದಮ್ಮ,‌ ಕೊಟ್ಟಂ ಪೆದ್ದಮ್ಮ, ಗೊಡುಗು ಇದ್ದಮ್ಮ, ಮಲ್ಲಮ್ಮ, ಅಂಜಮ್ಮ ಎಂದು ಗುರುತಿಸಲಾಗಿದೆ. ಐದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆಟೊದಲ್ಲಿ 20ಕ್ಕೂ ಹೆಚ್ಚು ಜನರು ಇದ್ದರು ಎಂದು ತಿಳಿದುಬಂದಿದೆ.

No Comments

Leave A Comment