Log In
BREAKING NEWS >
ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ....

ಪರ್ಯಾಯಪಂಚಶತಮಾನೋತ್ಸವ ೬ನೇ ದಿನ:ಗಣ್ಯರಿಗೆ ಸನ್ಮಾನ

ಉಡುಪಿ:ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ, “ಪರ್ಯಾಯಪಂಚಶತಮಾನೋತ್ಸವ”ದ ಕಾರ್ಯಕ್ರಮದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರಿನ ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ.ಎಂ.ಬಿ.ಪುರಾಣಿಕ್, ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಡಾ.ಜಗದೀಶ ಶೆಟ್ಟಿ ಇವರು ಅಭ್ಯಾಗತರಾಗಿ ಉಪಸ್ಥಿತರಿದ್ದರು.
ಉಡುಪಿಯ ಹಿರಿಯ ಲೆಕ್ಕಪರಿಶೋಧಕರಾದ ಯು.ಕೆ.ಮಯ್ಯ,ಭಾರತೀಶ ಬಲ್ಲಾಳ,ಉದ್ಯಮಿ ಪದ್ಮನಾಭ ಭಟ್,ಮಣಿಪಾಲ ಪ್ರಸನ್ನ ಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬೆಳ್ಳಿಪಾಡಿ ಹರಿಪ್ರಸಾದ್ ರೈ,ಉಡುಪಿ ಟೌನ್ ಕೋ.ಬ್ಯಾಂಕಿನ ನಿವೃತ್ತ ಮಹಾ ಪ್ರಬಂಧಕರಾದ ಬಿ.ವಿ.ಲಕ್ಷ್ಮೀನಾರಾಯಣ ಇವರಿಗೆ ಪರ್ಯಾಯ ಶ್ರೀಪಾದರು ಸನ್ಮಾನಿಸಿದರು.

No Comments

Leave A Comment