ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ತಂಡವೊಂದು ಕೆ.ಜಿ ಗಟ್ಟಲೆ ಗಾಂಜಾ ಮಾರಾಟಕ್ಕೆ ಯತ್ನಿಸುತ್ತದ್ದ ವೇಳೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳು ಅಬ್ದುಲ್ ಅಝೀಝ್,ಹಪೀಝ್ ಮೊಯ್ದಿನ್ ಎಂದು ತಿಳಿದು ಬಂದಿದೆ. ಆರೋಪಿಗಳಿಂದ 23.980 ಗ್ರಾಂ ಗಾಂಜಾ ವನ್ನು ವಶಪಡಿಸಿಕೊಂಡಿದ್ದಾರೆ.ಸಿಸಿಬಿ ಪೊಲೀಸರು ಬಂಧಿತ ಆರೋಪಿಗಳನ್ನು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 15 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು ತೆಲಂಗಾಣ ಮೂಲದ ವಿಠಲ್ ಚೌಹಾನ್ ಮತ್ತು ಬಿದರ್ ನಿವಾಸಿಗಳಾದ ಸಂಜೀವ್ ಕುಮಾರ್, ಕಲ್ಲಪ್ಪ ಎಂದು ತಿಳಿದು ಬಂದಿದೆ.
ದೇರಳಕಟ್ಡೆಯಿಂದ ಮುಡಿಪು ಕಡೆಗೆ ವರ್ನಾ ಕಾರಿನಲ್ಲಿ ಗಾಂಜಾ ಸಾಗಾಟ ನಡೆಸುತ್ತಿರುವಾಗ ವಶಕ್ಕೆ ಪಡೆದಿದ್ದಾರೆ.
ಉಳ್ಳಾಲ ಮತ್ತು ಕೊಣಾಜೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.ಬಂಧಿತ ಆರೋಪುಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.