Log In
BREAKING NEWS >
ಸೋಮವಾರದಿ೦ದ ಚಿನ್ನಾಭರಣದ ಅ೦ಗಡಿ ಅಲ್ ಲಾಕ್ -ಚಿನ್ನ ಖರೀದಿಸಲೊ೦ದು ಅವಕಾಶ...

ಏಮ್ಸ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಆಪ್ ಶಾಸಕ ಸೋಮನಾಥ್ ಭಾರ್ತಿ ಅಪರಾಧಿ ಎಂದು ದೆಹಲಿ ಕೋರ್ಟ್ ಆದೇಶ

ನವದೆಹಲಿ: 2016ರಲ್ಲಿ ಏಮ್ಸ್ ನ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಶನಿವಾರ ಆಮ್ ಆದ್ಮಿ ಪಕ್ಷದ ಶಾಸಕ ಸೋಮನಾಥ್ ಭಾರ್ತಿಯವರು ಅಪರಾಧಿ ಎಂದು ತೀರ್ಪು ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಕೋರ್ಟ್ ಇತರ ನಾಲ್ವರನ್ನು ಆರೋಪಮುಕ್ತಗೊಳಿಸಿದೆ. ನಿನ್ನೆ ಆದೇಶ ಹೊರಡಿಸಿದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ, ಆರೋಪಿ ಸೋಮನಾಥ್ ಭಾರ್ತಿ ವಿರುದ್ಧ ಆರೋಪಕ್ಕೆ ಸಂಬಂಧಪಟ್ಟಂತೆ ಐಪಿಸಿ ಸೆಕ್ಷನ್ 149ರಡಿ ಅಪರಾಧಿ ಎಂದು ಸಾಬೀತಾಗಿದೆ. 1984ರ ಸಾರ್ವಜನಿಕ ಆಸ್ತಿಗೆ ಹಾನಿ ತಡೆ ಕಾಯ್ದೆಯ ಸೆಕ್ಷನ್ 3ರಡಿ ಸೇರಿದಂತೆ ಹಲವು ಕಾಯ್ದೆಗಳಡಿಯಲ್ಲಿ ಸಹ ಸೋಮ ಭಾರ್ತಿ ಅಪರಾಧಿ ಎಂದು ಸಾಬೀತಾಗಿದೆ ಎಂದರು.

ಏಮ್ಸ್ ನ ಭದ್ರತಾ ಸಿಬ್ಬಂದಿ ಸಾರ್ವಜನಿಕ ಸೇವಕರ ನಿಯೋಜಿತ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದರು. ಸಾರ್ವಜನಿಕ ಸೇವಕನ ವ್ಯಾಖ್ಯಾನಕ್ಕೆ ಒಳಪಡುತ್ತಾರೆ. ಆದ್ದರಿಂದ, ಏಮ್ಸ್ ಭದ್ರತಾ ಸಿಬ್ಬಂದಿ ಸಾರ್ವಜನಿಕ ಸೇವಕರಲ್ಲ ಎಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಇದೇ ಪ್ರಕರಣದಲ್ಲಿ ನ್ಯಾಯಾಲಯವು ಇತರ ಆರೋಪಿಗಳಾದ ಜಗತ್ ಸೈನಿ, ದಲೀಪ್ ಜ್ಹಾ, ಸಂದೀಪ್ ಅಲಿಯಾಸ್ ಸೋನು ಮತ್ತು ರಾಕೇಶ್ ಪಾಂಡೆ ಅವರ ವಿರುದ್ಧ ಆರೋಪವನ್ನು ಮುಕ್ತಗೊಳಿಸಿ ದೋಷಮುಕ್ತಗೊಳಿಸಿದೆ.

ಸೆಪ್ಟೆಂಬರ್ 9,2016ರಲ್ಲಿ ಏಮ್ಸ್ ನ ಮುಖ್ಯ ಭದ್ರತಾ ಅಧಿಕಾರಿ ಆರ್ ಎಸ್ ರಾವತ್ ದೆಹಲಿ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿ ಶಾಸಕ ಭಾರ್ತಿ ಮತ್ತು ಅವರ 300 ಬೆಂಬಲಿಗರು ಏಮ್ಸ್ ನ ಭದ್ರತಾ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿದರು. ಅಂದು ಸರ್ಕಾರದ ಆಸ್ತಿಯ ಬೇಲಿಯನ್ನು ಹಾನಿ ಮಾಡಲು ಪ್ರಚೋದನೆ ನೀಡಿದ್ದರು ಎಂದು ದೂರು ನೀಡಿದ್ದರು.

No Comments

Leave A Comment