Log In
BREAKING NEWS >
ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ....

ಶಿವಮೊಗ್ಗ: ಸೌಂದರ್ಯವರ್ಧಕ ತಯಾರಿಕಾ ಕಟ್ಟಡದಲ್ಲಿ ಭಾರೀ ಬೆಂಕಿ, ಲಕ್ಷಾಂತರ ರೂಪಾಯಿ ನಷ್ಟ

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಜಿಲೆಟಿನ್‍ ಕಡ್ಡಿ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ ಘಟನೆಯ ದಿಗ್ಭ್ರಮೆಯಿಂದ ಜನರು ಹೊರಬರುವ ಮುನ್ನವೇ ಇಲ್ಲಿನ ಜನನಿಬಿಡ ಗಾಂಧಿ ಬಜಾರ್ ಪ್ರದೇಶದ ಸೌಂದರ್ಯವರ್ಧಕ ತಯಾರಿಕಾ ಘಟಕದಲ್ಲಿ ಶನಿವಾರ ರಾತ್ರಿಭಾರೀ ಬೆಂಕಿ ಕಾಣಿಸಿಕೊಂಡಿದೆ.

ಘಟನೆಯಲ್ಲಿ ಪ್ರಾಣಹಾನಿ ಬಗ್ಗೆ ಯಾವುದೇ ವರದಿಯಾಗಿಲ್ಲ. ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಜ್ವಾಲೆಯನ್ನು ನಂದಿಸಿದ್ದಾರೆ. ಎರಡು ಅಂತಸ್ತಿನ ಕಟ್ಟಡದಲ್ಲಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸೌಂದರ್ಯವರ್ಧಕ ವಸ್ತುಗಳನ್ನು ಬೆಂಕಿಯಲ್ಲಿ ಸುಟ್ಟು ಹೋಗಿವೆ.

ಬೆಂಕಿಯಿಂದ ಅಕ್ಕಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ನಷ್ಟವನ್ನು ಇನ್ನೂ ಅಂದಾಜು ಮಾಡಿಲ್ಲ. ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment