Log In
BREAKING NEWS >
ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ....

ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲಾಗುವುದು ಎಂದು ನಾನು ಹೇಳಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

ಶಿವಮೊಗ್ಗ: ಅನಧಿಕೃತ ಕಲ್ಲು ಗಣಿಗಾರಿಕೆಯ ಸಕ್ರಮಕ್ಕೆ ಅರ್ಜಿ ಸಲ್ಲಿಸಿ ಎಂದು ಹೇಳಿ ತೀವ್ರ ಟೀಕೆಗೆ ಗುರಿಯಾಗಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ, ಅನಧಿಕೃತ ಗಣಿಗಾರಿಕೆ ನಡೆಸುವವರು ಅಧಿಕೃತಗೊಳಿಸಲು ಅರ್ಜಿ ಸಲ್ಲಿಸಬೇಕು, ಕಾನೂನಿನಲ್ಲಿ ಅವಕಾಶವಿದ್ದರೆ ಮಾತ್ರ ಅಂತವರ ಗಣಿಗಾರಿಕೆಯನ್ನು ಸಕ್ರಮಗೊಳಿಸಲಾಗುವುದು ಎಂದು ಹೇಳಿದ್ದೆ ಎಂದಿದ್ದಾರೆ.

ಇಂದು ಬೆಳಗ್ಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಬರುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಕಟ್ಟಳೆಗಳನ್ನು ಪೂರೈಸುವ ಗಣಿಗಾರಿಕೆಗಳನ್ನು ಮಾತ್ರ ಸಕ್ರಮಗೊಳಿಸುವಂತೆ ನಾನು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದ್ದೇನೆ. ಅನಧಿಕೃತ ಗಣಿಗಾರಿಕೆ ಮಾಡುತ್ತಿದ್ದರೆ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು ಎಂದರು.

ಎಲ್ಲಾ ಅನಧಿಕೃತ ಗಣಿಗಾರಿಕೆಗಳನ್ನು ತಕ್ಷಣವೇ ನಿಲ್ಲಿಸಲಾಗುವುದು. ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಹೇಳಿದ್ದೇನೆ. ಅನಧಿಕೃತ ಗಣಿಗಾರಿಕೆ ಮಾಡುವವರು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಾರೆ. ಮುಖ್ಯಮಂತ್ರಿಯಾಗಿ ನನ್ನ ಸಾಮರ್ಥ್ಯದೊಳಗೆ ಗಣಿಗಾರಿಕೆಯಿಂದ ಆಯಾ ಸ್ಥಳದ ಸುತ್ತಮುತ್ತ ಯಾವುದೇ ಸಮಸ್ಯೆಯಿಲ್ಲದಿದ್ದರೆ ಅಧಿಕಾರಿಗಳು ಗಣಿಗಾರಿಕೆ ಮುಂದುವರಿಸಲು ಅನುಮತಿ ನೀಡುತ್ತಾರೆ. ಅಂದರೆ ಇದರರ್ಥ ಅನಧಿಕೃತವಾಗಿ ಗಣಿಗಾರಿಕೆ ನಡೆಸುವವರು ತಕ್ಷಣವೇ ನಿಲ್ಲಿಸಬೇಕು ಎಂಬುದಾಗಿದೆ ಎಂದರು

No Comments

Leave A Comment