ನೂತನ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಅಂಗಾರ ಶ್ರೀಕೃಷ್ಣಮಠಕ್ಕೆ ಭೇಟಿ ಉಡುಪಿ:ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ ಮತ್ತು ಬಂದರು ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಅಂಗಾರ ಅವರು ಭೇಟಿ ನೀಡಿ ಶ್ರೀ ಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಬಿ.ಜೆ.ಪಿ. ಜಿಲ್ಲಾಧ್ಯಕ್ಷ, ಮುಖಂಡರಾದ ಯಶಪಾಲ್ ಸುವರ್ಣ, ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್,ಸಿ.ಇ.ಓ ಕಡೆಕಾರ್ ಶ್ರೀಶ ಭಟ್, ಶ್ರೀ ಕೃಷ್ಣ ಸೇವಾ ಸಮಿತಿಯ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು. Share this:TweetWhatsAppEmailPrintTelegram