Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ಹಾಸನ: ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಸಾವು

ಹಾಸನ:  ಹಾಸನದಲ್ಲಿ ಕಾಡಾನೆಗಳ ಉಪಟಳ ಮುಂದುವರೆದಿದ್ದು, ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕನೊಬ್ಬ ಬಲಿಯಾಗಿರುವ ಘಟನೆ ಅರಕಲಗೂಡು ತಾಲ್ಲೂಕಿನ ಹಾಸನ-ಕೊಡಗು ಗಣಿ ಭಾಗದ ಬಾಣಾವರ ಗೇಟ್‍ನ ಬೆಟ್ಟಗೆಡಲೆ ಬಳಿ ನಡೆದಿದೆ.

ಅರಕಲಗೂಡು ತಾಲ್ಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ ನಿವಾಸಿ ರವಿ(35) ಮೃತಪಟ್ಟ ದುರ್ದೈವಿ. ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಕಾಫಿ ಕ್ಯೂರಿಂಗ್‍ನಲ್ಲಿ ಕೆಲಸ ಮುಗಿಸಿಕೊಂಡು ಸ್ನೇಹಿತರೊಂದಿಗೆ ಬೈಕ್‍ನಲ್ಲಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾಗ ಬಾಣವಾರ ಗೇಟ್ ಬಳಿ ಎದುರಿಗೆ ಬಂದ ಕಾಡಾನೆ ರವಿಯನ್ನು ಅಟ್ಟಾಡಿಸಿಕೊಂಡು ತಿಳಿದು ಸಾಯಿಸಿದೆ.

ಕೆಲಸ ಮುಗಿಸಿಕೊಂಡು ತಡ ರಾತ್ರಿ ಸುಮಾರು 11ಗಂಟೆಯ ಸಮಯದಲ್ಲಿ ರವಿ ತನ್ನ ಸ್ನೇಹಿತನ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾಡಾನೆ ರಸ್ತೆ ಮಧ್ಯೆ ಅಡ್ಡಬಂದಿದೆ. ಈ ಹಿನ್ನೆಲೆಯಲ್ಲಿ ಗಾಬರಿಯಿಂದ ಬೈಕ್ ಬಿಟ್ಟು ಸವಾರರಿಬ್ಬರೂ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ.

ಆದ್ರೆ ಕಾಡಾನೆ ಅಟ್ಟಾಡಿಸಿಕೊಂಡು ಹೋಗಿ ಹಿಂಬದಿ ಸವಾರ ರವಿಯನ್ನ ತುಳಿದು ಸಾಯಿಸಿದೆ. ಮತ್ತೋರ್ವ ವ್ಯಕ್ತಿ ಸ್ಥಳದಿಂದ ಓಡಿ ಪ್ರಾಣ ಉಳಿಸಿಕೊಂಡಿದ್ದಾನೆ. ಅರಕಲಗೂಡು ತಾಲ್ಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ ರವಿ ಆನೆ ತುಳಿತಕ್ಕೆ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ಪುಂಡಾನೆ ಹಾವಳಿಗೆ ಮೂರು ತಿಂಗಳ ಅಂತರದಲ್ಲಿ ನಾಲ್ವರು ಬಲಿಯಾಗಿದ್ದಾರೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಕೊಣನೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment